Thursday, 12th December 2024

Viral Video: ಕುಡಿದ ಮತ್ತಿನಲ್ಲಿದ್ದ ನಡುರಸ್ತೆಯಲ್ಲಿ ಪ್ಯಾಂಟ್‌ ಬಿಚ್ಚಿ ಕಾನ್ಸ್‌ಟೇಬಲ್‌ ಮಾಡಿದ್ದೇನು ಗೊತ್ತಾ? ಭಾರೀ ವೈರಲ್‌ ಆಗ್ತಿದೆ ಈ ವಿಡಿಯೊ

Viral Video

ಆಗ್ರಾ:‍ ನ್ಯಾಯ, ಕಾನೂನು ಕಾಪಾಡುವ ಪೊಲೀಸರೇ ಕುಕೃತ್ಯ ಎಸಗಿದ್ದರೆ ಜನ ಸಾಮಾನ್ಯರು ಮಾಡೋದಾದರೂ ಏನು? ಅಂತಹದ್ದೇ ಒಂದು ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಪೊಲೀಸ್‌ ಕಾನ್ಸ್‌ಟೇಬಲ್‌ವೊಬ್ಬ ಪೊಲೀಸ್‌ ಇಲಾಖೆಯ ವರ್ಚಸ್ಸಿಗೇ ಧಕ್ಕೆ ತರುವಂತಹ ಕೃತ್ಯ ಎಸಗಿದ್ದಾರೆ. ಕುಡಿದ ಮತ್ತಿನಲ್ಲಿದ್ದ ಕಾನ್ಸ್‌ಟೇಬಲ್‌ ನಡುರಸ್ತೆಯಲ್ಲಿ ಮಾಡಿದ ಅವಾಂತರದ ವಿಡಿಯೊವೊಂದು ಸೋಶಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟ್ಟೆ ವೈರಲ್ (Viral Video) ಆಗಿದೆ.

ಉತ್ತರ ಪ್ರದೇಶದ ಆಗ್ರಾದಲ್ಲಿ ಕಾನ್ಸ್‌ಟೇಬಲ್‌ ಒಬ್ಬರು ಕುಡಿದ ಮತ್ತಿನಲ್ಲಿ ಪೊಲೀಸ್ ಠಾಣೆಯ ಹೊರಗೆ ನಡು ರಸ್ತೆಯಲ್ಲಿ ವಾಹನಗಳು ಓಡಾಡುವಾಗ ತಮ್ಮ ಪ್ಯಾಂಟ್ ಬಿಚ್ಚಿ ಎಲ್ಲರ ಮುಂದೆ ಮೂತ್ರ ವಿಸರ್ಜನೆ ಮಾಡಿದ್ದಾರೆ. ಪೊಲೀಸ್ ಕಾನ್ಸ್‌ಟೇಬಲ್‌ ಮಾಡಿದ ಈ ನಾಚಿಕೆಗೇಡಿನ ಕೃತ್ಯವನ್ನು ನೋಡಿದ ಜನರು ಶಾಕ್‌ ಆಗಿದ್ದಾರೆ. ಕೆಲವರು ಈ ಘಟನೆಯ ವಿಡಿಯೊವನ್ನು ರೆಕಾರ್ಡ್ ಮಾಡಿ ಸೋಶಿಯಲ್ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದಾರೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇಡೀ ಪೊಲೀಸ್ ಇಲಾಖೆಗೆ ಮುಜುಗರವನ್ನುಂಟು ಮಾಡಿದೆ.

ಆಗ್ರಾದ ಸದರ್ ಪೊಲೀಸ್ ಠಾಣೆ ಪ್ರದೇಶದ ಶಹೀದ್ ನಗರ ಪೊಲೀಸ್ ಠಾಣೆಯ ಹೊರಗೆ ಈ ಘಟನೆ ನಡೆದಿದೆ. ಈ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ನೋಡಿದ ಬಳಕೆದಾರರು ರಸ್ತೆಯ ಮಧ್ಯದಲ್ಲಿ ಇಂತಹ ನಾಚಿಕೆಗೇಡಿನ ಕೃತ್ಯ ಮಾಡಿದ್ದಕ್ಕಾಗಿ ಪೊಲೀಸ್ ಕಾನ್ಸ್‌ಟೇಬಲ್‌ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಮಾಹಿತಿ ಪ್ರಕಾರ, ಪೊಲೀಸ್‍ ಕಾನ್ಸ್‌ಟೇಬಲ್‌ ಬಬ್ಲು ಗೌತಮ್ ಎಂದು ಗುರುತಿಸಲಾಗಿದ್ದು, ಅವರು ಶಹೀದ್ ನಗರ ಪೊಲೀಸ್ ಹೊರಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಘಟನೆಯ ಸಮಯದಲ್ಲಿ ಕಾನ್ಸ್ಟೇಬಲ್ ಕರ್ತವ್ಯದಲ್ಲಿ ಇರಲಿಲ್ಲ ಎನ್ನಲಾಗಿದೆ. ಆದರೂ ಅವರು ಸಮವಸ್ತ್ರ ಧರಿಸಿ, ಬೂಟುಗಳನ್ನು ಸಹ ಧರಿಸದೆ ರಸ್ತೆಯ ಮಧ್ಯದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾರೆ ಎನ್ನಲಾಗಿದೆ.

ಈ ನಾಚಿಕೆಗೇಡಿನ ಕೃತ್ಯಕ್ಕಾಗಿ ಪೊಲೀಸ್ ಕಾನ್ಸ್‌ಟೇಬಲ್‌ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಮತ್ತು ಅವರನ್ನು ತಕ್ಷಣ ಅಮಾನತುಗೊಳಿಸಲಾಗಿದೆ. ಈ ಬಗ್ಗೆ  ಇಲಾಖಾಯಿಂದ  ವಿಚಾರಣೆ ನಡೆಯುತ್ತಿದೆ ಎಂದು ಆಗ್ರಾ ಪೊಲೀಸ್ ಕಮಿಷನರೇಟ್ ಟ್ವೀಟ್ ಮೂಲಕ  ತಿಳಿಸಿದ್ದಾರೆ.

ಇದನ್ನೂ ಓದಿ: ಒಂದಲ್ಲ, ಎರಡಲ್ಲ ಬರೋಬ್ಬರಿ 14 ಶ್ವಾನಗಳ ಮಾರಣಹೋಮ! ಚರಂಡಿಯಲ್ಲಿ ತೇಲಿದ ಶವಗಳು- ಶಾಕಿಂಗ್‌ ವಿಡಿಯೋ ವೈರಲ್‌

ಸೋಶಿಯಲ್ ಮಿಡಿಯಾ ಬಳಕೆದಾರರು ವಿಡಿಯೊಗೆ ಪ್ರತಿಕ್ರಿಯಿಸಿದ್ದಾರೆ ಮತ್ತು ಪೊಲೀಸ್ ಕಾನ್ಸ್‌ಟೇಬಲ್‌ ಅವರ ಕೃತ್ಯವನ್ನು ಖಂಡಿಸಿದ್ದಾರೆ. ಅವಮಾನಕರ ಕೃತ್ಯಕ್ಕಾಗಿ ಪೊಲೀಸ್ ಕಾನ್ಸ್ಟೇಬಲ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅನೇಕರು ಒತ್ತಾಯಿಸುತ್ತಿದ್ದಾರೆ.