Friday, 22nd November 2024

ಸೆಪ್ಟೆಂಬರಿನಲ್ಲಿ ವಿಶ್ವಕರ್ಮ ಯೋಜನೆ ಪ್ರಾರಂಭ

ವದೆಹಲಿ: ಸಾಂಪ್ರದಾಯಿಕ ಕೌಶಲ್ಯ ಹೊಂದಿರುವವರಿಗೆ ಮುಂದಿನ ತಿಂಗಳಲ್ಲಿ 13,000 ರಿಂದ 15,000 ಕೋಟಿ ರೂ.ಗಳ ಹಂಚಿಕೆಯೊಂದಿಗೆ ಸರ್ಕಾರ ವಿಶ್ವಕರ್ಮ ಯೋಜನೆಯನ್ನು ಪ್ರಾರಂಭಿಸಲಿದೆ ಎಂದು ಪ್ರಧಾನಿ ಮೋದಿ ತಮ್ಮ ಸ್ವಾತಂತ್ರ್ಯ ದಿನಾ ಚರಣೆಯ ಭಾಷಣದಲ್ಲಿ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪು ಕೋಟೆಯಿಂದ ಮಾಡಿದ ಭಾಷಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸು ತ್ತಿರುವ ತಮ್ಮ ‘140 ಕೋಟಿ ಕುಟುಂಬ ಸದಸ್ಯರಿಗೆ’ ಶುಭ ಕೋರಿದರು.

“ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಮತ್ತು ಈಗ ಜನಸಂಖ್ಯೆಯ ದೃಷ್ಟಿಯಿಂದ ಪ್ರಮುಖ ದೇಶವಾಗಿದೆ. ಇಷ್ಟು ದೊಡ್ಡ ದೇಶ ದಲ್ಲಿ, ನನ್ನ ಕುಟುಂಬದ 140 ಕೋಟಿ ಸದಸ್ಯರು ಇಂದು ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದ್ದಾರೆ” ಎಂದು ಅವರು ಹೇಳಿದರು. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಮತ್ತು ಈಗ ಜನಸಂಖ್ಯೆಯ ದೃಷ್ಟಿಯಿಂದ ಪ್ರಮುಖ ದೇಶವಾಗಿದೆ. ಇಷ್ಟು ದೊಡ್ಡ ದೇಶ ದಲ್ಲಿ, ನನ್ನ ಕುಟುಂಬದ 140 ಕೋಟಿ ಸದಸ್ಯರು ಸಂಭ್ರಮಿಸುತ್ತಿದ್ದಾರೆ ಅಂಥ ತಿಳಿಸಿದರು.

2014ರಲ್ಲಿ ನಾವು ಅಧಿಕಾರಕ್ಕೆ ಬಂದಾಗ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ 10ನೇ ಸ್ಥಾನದಲ್ಲಿದ್ದೆವು. ಇಂದು, 140 ಕೋಟಿ ಭಾರತೀ ಯರ ಪ್ರಯತ್ನದಿಂದ, ನಾವು ಐದನೇ ಸ್ಥಾನವನ್ನು ತಲುಪಿದ್ದೇವೆ, ಇದು ಹಾಗೆ ಸಂಭವಿಸಲಿಲ್ಲ. ದೇಶವನ್ನು ತನ್ನ ಹಿಡಿತದಲ್ಲಿಟ್ಟು ಕೊಂಡಿದ್ದ ಭ್ರಷ್ಟಾಚಾರದ ರಾಕ್ಷಸ – ನಾವು ಸೋರಿಕೆಯನ್ನು ನಿಲ್ಲಿಸಿ ಬಲವಾದ ಆರ್ಥಿಕತೆಯನ್ನು ರಚಿಸಿದ್ದೇವೆ ಎಂದು ತಿಳಿಸಿದರು.