Sunday, 15th December 2024

ಮಾರ್ಗರೇಟ್‌ ಆಳ್ವ – ವಿಪಕ್ಷಗಳ ಉಪರಾಷ್ಟ್ರಪತಿ ಅಭ್ಯರ್ಥಿ

ನವದೆಹಲಿ: ದೇಶದ ಉಪರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿ ಘೋಷಣೆ ಯಾದ ಬೆನ್ನಲ್ಲೇ, ವಿಪಕ್ಷಗಳ ನಾಯಕರು ತಮ್ಮ ಅಭ್ಯರ್ಥಿಯನ್ನು ಘೋಷಿಸಿದ್ದಾರೆ.

ವಿಪಕ್ಷ ನಾಯಕರು ಉಪರಾಷ್ಟ್ರಪತಿ ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿಯಾಗಿ ಹಿರಿಯ ಕಾಂಗ್ರೆಸ್‌ ನಾಯಕಿ, ದಕ್ಷಿಣ ಕನ್ನಡ ಮೂಲದ ಮಾರ್ಗರೇಟ್‌ ಆಳ್ವರನ್ನು ಅಂತಿಮ ಗೊಳಿದ್ದಾರೆ. ಮಾರ್ಗರೇಟ್‌ ಅವರು ರಾಜ್ಯಸಭಾ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.

http://vishwavani.news/tamim-iqbal-retired/

ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನಕರ್ ಅವರ ಹೆಸರು ಘೋಷಣೆ ಯಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಜಗದೀಪ್ ಧನಕರ್ ಹೆಸರು ಪ್ರಕಟಿಸಿದ್ದಾರೆ. ನಾಮಪತ್ರ ಸಲ್ಲಿಸಲು ಜು.19 ಕೊನೆಯ ದಿನವಾಗಿದ್ದು, ಆಗಸ್ಟ್‌ 6 ರಂದು ಚುನಾವಣೆ ನಡೆಯಲಿದೆ.