ನವದೆಹಲಿ: ಕೇಂದ್ರ ಚುನಾವಣಾ ಆಯೋಗವು ಉಪರಾಷ್ಟ್ರಪತಿಗಳ ಆಯ್ಕೆಗಾಗಿ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 6 ರಂದು ಮತದಾನ ನಡೆಯಲಿದೆ. ಅಂದೇ ಮತಏಣಿಕೆ ಕಾರ್ಯ ನಡೆದು, ಫಲಿತಾಂಶ ಪ್ರಕಟಗೊಳ್ಳಲಿದೆ.
ಕೇಂದ್ರ ಚುನಾವಣಾ ಆಯೋಗದಿಂದ ಮಂಗಳವಾರ ಅಧಿಸೂಚನೆ ಹೊರಡಿಸಿದ್ದು, ಆಗಸ್ಟ್ 6ರಂದು ಮತದಾನ ನಡೆಯಲಿದೆ.
ಪ್ರಸ್ತುತ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಆಗಸ್ಟ್ 10ರಂದು ಕೊನೆಗೊಳ್ಳ ಲಿದ್ದು, ದೇಶದಲ್ಲಿ ಆಗಸ್ಟ್ 6ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ.
ಆಗಸ್ಟ್ 6 ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಉಪರಾಷ್ಟ್ರಪತಿಗಳ ಆಯ್ಕೆ ಪ್ರಕ್ರಿಗೆ ಮತದಾನ ನಡೆಯಲಿದೆ.