ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಹಾಗೂ ಮತ್ತಿತರರನ್ನು ಒಳಗೊಂಡ ಪಕ್ಷದ ಸಂಸದೀಯ ಸಭೆಯಲ್ಲಿ ಉಪರಾಷ್ಟ್ರಪತಿ ಹುದ್ದೆಗೆ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಬಹುದು. ಬಳಿಕ ಮೈತ್ರಿ ಪಕ್ಷಗಳಿಗೆ ತನ್ನ ಅಭ್ಯರ್ಥಿಯ ಹೆಸರನ್ನು ತಿಳಿಸಬಹುದು ಎನ್ನಲಾಗಿದೆ.
ಬಿಜೆಪಿ, ಉಪರಾಷ್ಟ್ರಪತಿ ಚುನಾವಣೆಯಲ್ಲಿ ತನ್ನ ಅಭ್ಯರ್ಥಿ ಬೆಂಬಲಿಸುವಂತೆ ಇತರ ಪಕ್ಷಗಳಿಗೂ ವಿನಂತಿಸಿಕೊಳ್ಳುವ ಸಾಧ್ಯತೆ ಇದೆ. ವಿರೋಧ ಪಕ್ಷಗಳು ರಾಷ್ಟ್ರಪತಿ ಚುನಾವಣೆಗೆ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಿದಂತೆ ಉಪರಾಷ್ಟ್ರಪತಿ ಚುನಾವಣೆ ಗೂ ಅಭ್ಯರ್ಥಿಯನ್ನು ಘೋಷಿಸುವ ಸಂಭವವಿದೆ.
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಕೆಗೆ ಜು.19 ಕೊನೆಯ ದಿನವಾಗಿದೆ. ಆಗಸ್ಟ್ 6ಕ್ಕೆ ಚುನಾವಣೆ ನಡೆಯಲಿದೆ.