Thursday, 12th December 2024

Wayanad by-election: ವಯನಾಡ್‌ನಲ್ಲಿ ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿ ಅಭ್ಯರ್ಥಿ ಘೋಷಣೆ; ನವ್ಯಾ ಹರಿದಾಸ್‌ ಕಣಕ್ಕೆ

wayand

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ(Rahul Gandhi) ಅವರ ರಾಜೀನಾಮೆಯಿಂದ ತೆರವುಗೊಂಡಿಡುವ ಕೇರಳದ ವಯನಾಡ್‌ ಲೋಕಸಭಾ ಕ್ಷೇತ್ರ(Wayanad by-election) ಕ್ಕೆ ನವೆಂಬರ್ 13 ರಂದು ಬೈ ಎಲೆಕ್ಷನ್‌ ನಡೆಯುತ್ತಿದೆ. ಕಾಂಗ್ರೆಸ್‌ನಿಂದ ಪ್ರಿಯಾಂಕಾ ಗಾಂಧಿ ವಾಧ್ರಾ(Priyanka Gandhi Vadra)ಯವರನ್ನು ಸ್ಪರ್ಧಿಸುತ್ತಿದ್ದು, ಅವರ ವಿರುದ್ಧ ಬಿಜೆಪಿ ನವ್ಯಾ ಹರಿದಾಸ್‌ (Navya Haridas) ಅವರನ್ನು ಕಣಕ್ಕಿಳಿಸಿದೆ.

ಇನ್ನು ಬಿಜೆಪಿ ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಕರ್ನಾಟಕ, ಕೇರಳ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಪಶ್ಚಿಮ ಬಂಗಾಳದಿಂದ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನೂ ಬಿಜೆಪಿ ಬಿಡುಗಡೆ ಮಾಡಿದೆ. ಕರ್ನಾಟಕದ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು, ಶಿಗ್ಗಾಂವ್‌ನಿಂದ ಭರತ್‌ ಬಸವರಾಜ್‌ ಬೊಮ್ಮಾಯ್‌ ಮತ್ತು ಸಂಡೂರ್‌ನಿಂದ ಬಂಗಾರು ಹನುಮಂತುಗೆ ಮಣೆ ಹಾಕಿದೆ.

ನವೆಂಬರ್‌ 13ರಂದು ದೇಶಾದ್ಯಂತ ಒಟ್ಟು 47 ವಿಧಾನಸಭಾ ಕ್ಷೇತ್ರಗಳೊಂದಿಗೆ ಏಕೈಕ ಲೋಕಸಭಾ ಕ್ಷೇತ್ರ ವಯನಾಡ್‌ ಕೂಡ ಉಪ ಚುನಾವಣೆ ಎದುರಿಸುತ್ತಿದೆ. ಇನ್ನು ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 25 ಕೊನೆಯ ದಿನವಾಗಿದ್ದು, ಉಮೇದುವಾರಿಕೆ ಹಿಂಪಡೆಯಲು ಅಕ್ಟೋಬರ್ 30 ಕೊನೆಯ ದಿನಾಂಕವಾಗಿದ್ದು, ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದ್ದು, ಅದೇ ದಿನಾಂಕದಂದು ಫಲಿತಾಂಶ ಪ್ರಕಟವಾಗಲಿದೆ. ರಾಯ್ ಬರೇಲಿ ಕ್ಷೇತ್ರವನ್ನು ಉಳಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಯನಾಡ್ ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ವಯನಾಡ್ ಉಪಚುನಾವಣೆಗೆ ಮುಂದಾಗಿದೆ.

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ (Karnataka by election) ಮುಹೂರ್ತ ಫಿಕ್ಸ್‌ ಆಗಿದೆ. ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳ ವಿಧಾನಸಭಾ ಕ್ಷೇತ್ರಗಳಲ್ಲಿ ನ.13 ರಂದು ಉಪ ಚುನಾವಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾಧಿಕಾರಿ ರಾಜೀವ್‌ ಕುಮಾರ್‌ ಹೇಳಿದ್ದಾರೆ.

ಚುನಾವಣಾ ಆಯೋಗವು ಅ.18ರಂದು ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಅ.25 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅ.28ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಅ.30 ಕಡೆಯ ದಿನವಾಗಿದೆ. ಕರ್ನಾಟಕ ಮೂರು ಕ್ಷೇತ್ರಗಳಾದ ಶಿಗ್ಗಾವಿ, ಚನ್ನಪಟ್ಟಣ ಮತ್ತು ಸಂಡೂರು ಕ್ಷೇತ್ರಗಳಿಗೆ ನವೆಂಬರ್‌ 13ರಂದು ಮತದಾನ ನಡೆಯಲಿದ್ದು, ನವೆಂಬರ್‌ 23ರಂದು ಫಲಿತಾಂಶ ಪ್ರಕಟವಾಗಲಿದೆ.