ತಿರುವನಂತಪುರಂ: ಇಡೀ ದೇಶದ ಕುತೂಹಲ ಕೆರಳಿಸಿರುವ ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ (Priyanka Gandhi) ಮುನ್ನಡೆ ಸಾಧಿಸಿದ್ದಾರೆ. ಬಹುತೇಕ ಸಮೀಕ್ಷೆಗಳೆಲ್ಲ ಪ್ರಿಯಾಂಕಾ ಅವರ ಗೆಲುವಿನ ಭವಿಷ್ಯ ನುಡಿದಿದ್ದು, ಅದರಂತೆ ಅವರು ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ರಾಹುಲ್ ಗಾಂಧಿ (Rahul Gandhi) ಗೆದ್ದು, ರಾಜೀನಾಮೆ ನೀಡಿದ ಕ್ಷೇತ್ರದಲ್ಲಿ ಇದೀಗ ಸಹೋದರಿ ಗೆಲುವಿನ ಖಾತೆ ತೆರೆಯುವ ಸಾಧ್ಯತೆ ನಿಚ್ಚಳವಾಗಿದೆ (Wayanad Election Result 2024).
ಕಾಂಗ್ರೆಸ್ ಭದ್ರಕೋಟೆಯಾಗಿದ್ದರೂ ಇಲ್ಲಿ ಈ ಬಾರಿ ಜಿದ್ದಾಜಿದ್ದಿನ ಹೋರಾಟ ನಡೆದಿದೆ. ಸುಮಾರು 16 ಮಂದಿ ಕಣದಲ್ಲಿದ್ದು, ಈ ಪೈಕಿ ಕಾಂಗ್ರೆಸ್ ನೇತೃತ್ವದ ಯುಡಿಎಫ್, ಸಿಪಿಐ (ಎಂ) ನೇತೃತ್ವದ ಎಲ್‌ಡಿಎಫ್ ಮತ್ತು ಬಿಜೆಪಿ ನೇತೃತ್ವದ ಎನ್‌ಡಿಎ ನಡುವೆ ನೇರಾನೇರ ಸ್ಪರ್ಧೆ ಏರ್ಪಟ್ಟಿದೆ. ಯುಡಿಎಫ್‌ನಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧಿಸಿದರೆ, ಎಲ್‌ಡಿಎಫ್‌ನಿಂದ ಸತ್ಯನ್ ಮೊಕೇರಿ ಕಣದಲ್ಲಿದ್ದಾರೆ, ಇವರಿಗೆ ಎನ್‌ಡಿಎಯ ನವ್ಯಾ ಹರಿದಾಸ್ ಪ್ರಬಲ ಪೈಪೋಟಿ ನೀಡುತ್ತಿದ್ದಾರೆ.
मेरी दादी श्रीमती इंदिरा गांधी जी अपने चुनाव अभियान की शुरुआत हमेशा महाराष्ट्र के नंदुरबार से करती थीं। वे मानती थीं कि आदिवासी समाज की संस्कृति सबसे अच्छी और अनूठी है क्योंकि वह प्रकृति का सम्मान और संरक्षण करती है। जब वे प्रधानमंत्री बनीं तो आदिवासी समाज के लिए कई महत्वपूर्ण… pic.twitter.com/AHiLFDNK0v
— Priyanka Gandhi Vadra (@priyankagandhi) November 19, 2024
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಭದ್ರಕೋಟೆ ಎನಿಸಿಕೊಂಡಿರುವ ಉತ್ತರ ಪ್ರದೇಶದ ರಾಯ್ ಬರೇಲಿ ಮತ್ತು ವಯನಾಡು ಎರಡೂ ಕಡೆ ರಾಹುಲ್ ಗಾಂಧಿ 3 ಲಕ್ಷಕ್ಕೂ ಅಧಿಕ ಮತಗಳಿಂದ ಜಯಭೇರಿ ಭಾರಿಸಿದ್ದರು. ಕೊನೆಗೆ ಅನಿವಾರ್ಯವಾಗಿ ವಯನಾಡು ಕ್ಷೇತ್ರಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಹೀಗಾಗಿ ಇಲ್ಲಿ ಉಪ ಚುನಾವಣೆ ಘೋಷಿಸಲಾಗಿತ್ತು. ನ. 13ರಂದು ಇಲ್ಲಿ ಮತದಾನ ನಡೆದಿತ್ತು.
ಮೊದಲ ಯತ್ನದಲ್ಲೇ ಸಿಕ್ಸರ್?
5 ವರ್ಷಗಳ ಹಿಂದೆ ಸಕ್ರೀಯ ರಾಜಕೀಯಕ್ಕೆ ಧುಮುಕಿದ ಪ್ರಿಯಾಂಕಾ ಗಾಂಧಿ ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಹೀಗಾಗಿ ಮೊದಲ ಪ್ರಯತ್ನದಲ್ಲೇ ಖಾತೆ ತೆರೆಯುವ ಸಾದ್ಯತೆ ಗೋಚರವಾಗಿದೆ. ಇವರ ಸ್ಪರ್ಧೆಯಿಂದ ಈ ಕ್ಷೇತ್ರ ದೇಶದ ಗಮನ ಸೆಳೆದಿದೆ. ಪ್ರಿಯಾಂಕಾ ಗಾಂಧಿ ಆಯ್ಕೆಯಾದರೆ ಇದೇ ಮೊದಲ ಬಾರಿಗೆ ಸಂಸದೆಯಾಗಿ ಸಂಸತ್ ಪ್ರವೇಶಿಸಲಿದ್ದಾರೆ. ಮೊದಲ ಬಾರಿಗೆ ಗಾಂಧಿ ಕುಟುಂಬದ ಮೂವರು ಸದಸ್ಯರಾದ ಸೋನಿಯಾ, ರಾಹುಲ್ ಮತ್ತು ಪ್ರಿಯಾಂಕಾ ಒಟ್ಟಿಗೆ ಸಂಸತ್ತಿನಲ್ಲಿ ಇರಲಿದ್ದಾರೆ. ಈ ಬಾರಿ ಸೋನಿಯಾ ಗಾಂಧಿ ರಾಯ್ ರಾಯ್ ಬರೇಲಿ ಕ್ಷೇತ್ರವನ್ನು ಮಗನಿಗಾಗಿ ತ್ಯಾಗ ಮಾಡಿ ರಾಜ್ಯಸಭೆಯತ್ತ ಮುಖ ಮಾಡಿದ್ದರು.
2019ರ ಲೋಕಸಭಾ ಚುನಾವಣೆಯಲ್ಲಿಯೇ ಪ್ರಿಯಾಂಕಾ ಗಾಂಧಿ ಕಣಕ್ಕಿಳಿಯುತ್ತಾರೆ ಎಂಬ ವದಂತಿ ಇತ್ತು. ಆಗ ಬಿಜೆಪಿ ಅಲೆಯನ್ನು ತಡೆಯಲು ಕಾಂಗ್ರೆಸ್ ವಾರಣಾಸಿ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕಿಳಿಸಲಿದೆ ಎಂದೇ ಊಹಿಸಲಾಗಿತ್ತು. ಆದರೆ ಅವರು ಸ್ಪರ್ಧಿಸಿರಲಿಲ್ಲ. ಕೊನೆಗೂ ಕಾರ್ಯಕರ್ತರ ಆಶಯದಂತೆ ಅವರು ಇದೀಗ ಸ್ಪರ್ಧೆಗೆ ಮನಸ್ಸು ಮಾಡಿದ್ದಾರೆ.
ಈ ಸುದ್ದಿಯನ್ನೂ ಓದಿ: Wayanad Bypolls: ವಯನಾಡಿನಲ್ಲಿ ಪ್ರಿಯಾಂಕಾ ಗಾಂಧಿ ಎದುರಿಸಲು ಸಜ್ಜಾದ ಬಿಜೆಪಿಯ ನವ್ಯಾ ಹರಿದಾಸ್ ಹಿನ್ನೆಲೆ ಕುತೂಹಲಕರ!