Saturday, 14th December 2024

ನಾಮಪತ್ರ ಸಲ್ಲಿಸಿದ ’ದೀದಿ’

ಕೋಲ್ಕತಾ: ನಂದಿಗ್ರಾಮ ವಿಧಾನಸಭಾ ಸ್ಥಾನಕ್ಕೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಬುಧವಾರ ನಾಮಪತ್ರ ಸಲ್ಲಿಸಿದರು.

ಸಾವಿರಾರು ಬೆಂಬಲಿಗರೊಂದಿಗೆ ರೋಡ್ ಷೋ ಮೂಲಕ ತೆರಳಿ ಮಮತಾ ಬ್ಯಾನರ್ಜಿ ಅವರು ನಾಮಪತ್ರ ಸಲ್ಲಿಕೆ ಮಾಡಿದರು. ಟಿಎಂಸಿ ಪಕ್ಷದ ಅಧ್ಯಕ್ಷ ಸುಬ್ರತಾ ಬಕ್ಷಿ ಅವರೊಂದಿಗೆ ಹಲ್ದಿಯಾ ಉಪವಿಭಾಗಾಧಿಕಾರಿ ಕಚೇರಿಗೆ ಬಂದ ಮಮತಾ ಬ್ಯಾನರ್ಜಿ, ಚುನಾವಣೆಗೆ ನಾಮಪತ್ರ ಸಲ್ಲಿಸಿದರು.

ಇನ್ನು ಟಿಎಂಸಿ ತೊರೆದು ಬಿಜೆಪಿಗೆ ಸೇರ್ಪಡೆಯಾಗಿರುವ ಬಿಜೆಪಿಯ ಮಾಜಿ ಮುಖಂಡ ಮತ್ತು ಸಚಿವರಾಗಿದ್ದ ಸುವೇಂದು ಅಧಿಕಾರಿ ನಂದಿಗ್ರಾಮದಲ್ಲಿ ದೀದಿ ಅವರ ಪ್ರತಿಸ್ಪರ್ಧಿಯಾಗಿದ್ದಾರೆ. 2016ರಲ್ಲಿ ಭವಾನಿಪುರ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಪಡೆದಿದ್ದ ಮಮತಾ, ಸಾಧ್ಯವಾದರೆ ನಂದಿಗ್ರಾಮ ಮತ್ತು ಭವಾನಿಪುರ ಎರಡೂ ಕ್ಷೇತ್ರಗಳಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದರು. ಅಂತಿಮವಾಗಿ ನಂದಿಗ್ರಾಮ ಒಂದು ಕ್ಷೇತ್ರವನ್ನಷ್ಟೇ ಆಯ್ಕೆ ಮಾಡಿಕೊಂಡಿದ್ದಾರೆ.