Sunday, 15th December 2024

ಮಮತಾ ಮಾಜಿ ಆಪ್ತ ಸುವೇಂದು ಬಿಜೆಪಿಗೆ ಸೇರ್ಪಡೆ

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಮಾಜಿ ಆಪ್ತ ಸುವೇಂದು ಅಧಿಕಾರಿ ಶನಿವಾರ ಬಿಜೆಪಿಗೆ ಸೇರ್ಪಡೆ ಯಾದರು.

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗಾಗಿ ಎರಡು ದಿನಗಳ ಕಾಲ ಪಶ್ಚಿಮ ಬಂಗಾಳ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಮುಖಂಡ ಅಮಿತ್ ಶಾ ಭೇಟಿ ನೀಡಿದ್ದು, ಅವರ ಸಮ್ಮುಖದಲ್ಲಿ ಸುವೇಂದು ಅಧಿಕೃತವಾಗಿ ಬಿಜೆಪಿ ಸೇರಿದರು.

ತೃಣಮೂಲ ಕಾಂಗ್ರೆಸ್‌ನಲ್ಲಿ ಆಳವಾದ ಕೊಳೆತ ಮತ್ತು ಅಸ್ವಸ್ಥತೆ ಉಂಟಾಗಿದೆ, ಒಂದೇ ದಿನದಲ್ಲಿ ಯಾವುದೇ ವ್ಯಕ್ತಿಯಿಂದ ಟಿಎಂಸಿ ಸ್ಥಾಪನೆಯಾಗಿಲ್ಲ.ಇದು ಬೃಹತ್ ಪ್ರಮಾಣದಲ್ಲಿ ನಿರಂತರ ಪ್ರಯತ್ನವಾಗಿತ್ತು ಎಂದು ಪತ್ರದಲ್ಲಿ ಬರೆದಿದ್ದಾರೆ.