ಜುಲೈ 4 ರಂದು ಚುನಾವಣೆ ನಡೆಯುವ ಸಾಧ್ಯತೆಯಿದೆ.
ಜೂ.7 ರಂದು ಪ್ರತಿಭಟನಾ ನಿರತ ಕುಸ್ತಿಪಟುಗಳೊಂದಿಗಿನ ಸಭೆಯ ನಂತರ ಕ್ರೀಡಾ ಸಚಿವ ಅನುರಾಗ್ ಠಾಕೂರ್, ಜೂ.30 ರೊಳಗೆ ಡಬ್ಲ್ಯುಎಫ್‌ಐ ಚುನಾವಣೆಗಳನ್ನು ನಡೆಸಲಾಗುವುದು ಎಂದು ಹೇಳಿದ್ದರು. ಆದರೆ ಈ ಗಡು ವನ್ನು ಅನುಸರಿಸುವುದು ಕಷ್ಟ ಎಂದು ಸ್ಪಷ್ಟವಾಗಿದೆ. ಏಕೆಂದರೆ ಡಬ್ಲ್ಯು ಎಫ್‌ಐಯ ಸಾಮಾನ್ಯ ಸಭೆ ವಿಶೇಷ ಸಭೆ ನಡೆಸಲು 21 ದಿನಗಳ ಸೂಚನೆ ಅಗತ್ಯವಿದೆ.
ಚುನಾವಣೆಗಳನ್ನು ವಾರ್ಷಿಕ ಸಾಮಾನ್ಯ ಸಭೆ ಅಥವಾ ಸಾಮಾನ್ಯ ಸಭೆಯಲ್ಲಿ ನಡೆಸಬಹುದು. ನಿರ್ಗಮಿತ ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಕುಟುಂಬದ ಯಾವುದೇ ಸದಸ್ಯರು ಅಥವಾ ಸಹವರ್ತಿಗಳನ್ನು ಚುನಾವಣೆಗೆ ಸ್ಪರ್ಧಿಸಲು ಸರ್ಕಾರವು ಅನುಮತಿಸುವುದಿಲ್ಲ ಎಂದು ಅನುರಾಗ್ ಠಾಕೂರ್ ಅವರು ಕುಸ್ತಿಪಟುಗಳಿಗೆ ಭರವಸೆ ನೀಡಿದ್ದರು. ಇದಾದ ನಂತರ ಕುಸ್ತಿಪಟುಗಳು ಜೂ.15 ರವರೆಗೆ ತಮ್ಮ ಪ್ರತಿಭಟನೆ ಯನ್ನು ನಿಲ್ಲಿಸಿದ್ದಾರೆ.