ಜೂನ್ 25 ರಂದು ಹೈಕೋರ್ಟ್ನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಎಸ್.ವಿ ಭಟ್ಟಿ ಅವರಿದ್ದ ಪೀಠವು ನಡೆಸಿತು. ಈ ವೇಳೆ ಚುನಾವಣೆಯನ್ನು ತಡೆಹಿಡಿದಿದ್ದ ಗುವಾಹತಿ ಹೈಕೋರ್ಟ್ನ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಇದೇ ವೇಳೆ ಕೇಂದ್ರ ಕ್ರೀಡಾ ಸಚಿವಾಲಯ, ಕುಸ್ತಿ ಫೆಡರೇಶನ್ ಆಫ್ ಇಂಡಿಯಾ, ಅಸ್ಸಾಂ ಕುಸ್ತಿ ಅಸೋಸಿ ಯೇಷನ್ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ. ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ಭಾರತ ಕುಸ್ತಿ ಫೆಡರೇಷನ್ನ ಚುನಾವಣೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡುವಂತೆ ಕೋರಿ ಅಸ್ಸಾಂ ಕುಸ್ತಿ ಸಂಸ್ಥೆ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಗುವಾಹಟಿ ಹೈಕೋರ್ಟ್ ಜು.28 ಕ್ಕೆ ಮುಂದೂಡಿತ್ತು.
ಜು.11 ರಂದು ಡಬ್ಲ್ಯೂಎಫ್ಐ ಚುನಾವಣೆ ನಡೆಸಬೇಕಿತ್ತು. ಆದರೆ ಅಸ್ಸಾಂ ಸಂಸ್ಥೆ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ಚುನಾವಣೆ ಪ್ರಕ್ರಿಯೆಗೂ ತಡೆ ನೀಡಲಾಗಿತ್ತು.