ಸತ್ಯಂ ಉಪಾಧ್ಯಾಯ ಕುಟುಂಬ ದುರಂತ ಅಂತ್ಯ ಕಂಡಿದೆ. ಕಾರಿನಲ್ಲಿ ಕುಟುಂಬದ ಸದಸ್ಯರು ಷಾಪಿಂಗ್‌ಗೆ ಹೋಗಿದ್ದರು. ಷಾಪಿಂಗ್ ಮುಗಿಸಿ ಮನೆಗೆ ವಾಪಸಾಗುವ ಸಂದರ್ಭದಲ್ಲಿ ಟ್ರಕ್ ಕಾರಿಗೆ ಡಿಕ್ಕಿ ಹೊಡೆದಿದೆ. ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ನಾಲ್ವರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕೇಸು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ದುರ್ಘಟನೆಗೆ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಟ್ವೀಟ್ ಮಾಡಿದ್ದು, ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಅಪಘಾತದ ಸುದ್ದಿ ಕೇಳಿ ಆಘಾತವಾಗಿದ್ದು, ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಸ್ಥರಿಗೆ ಭಗವಂತ ಈ ನೋವು ಭರಿಸುವ ಶಕ್ತಿ ನೀಡಲಿ’ ಎಂದು ಪ್ರಾರ್ಥಿಸಿದ್ದಾರೆ.