ಚಂಡೀಗಢ : ಪಂಜಾಬ್ ನ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಬುಧವಾರ ತಮ್ಮ ಹೊಸ ರಾಜಕೀಯ ಪಕ್ಷ ಘೋಷಣೆ ಮಾಡಿದರು.
ಅಮರಿಂದರ್ ಸಿಂಗ್, ನಾನು ಹೊಸ ಪಕ್ಷ ಸ್ಥಾಪಿಸುತ್ತಿದ್ದೇನೆ. ಚುನಾವಣಾ ಆಯೋಗದಿಂದ ಸ್ಪಷ್ಟನೆ ಸಿಕ್ಕ ಬಳಿಕ ಹೊಸ ಪಕ್ಷದ ಹೆಸರು ಹಾಗೂ ಚಿಹ್ನೆ ಯನ್ನು ಘೋಷಿಸುತ್ತೇನೆ. ಈ ಸಂಬಂಧ ವಕೀಲರು ಕೆಲಸ ಮಾಡುತ್ತಿದ್ದಾರೆ. ಕಳೆದ ನಾಲ್ಕೂವರೆ ವರ್ಷ ಗಳಲ್ಲಿ ಪಂಜಾಬ್ ಸಿಎಂ ಆಗಿ ನಾನು ಸಾಧಿಸಿದ ಸಾಧನೆಗಳ ಪಟ್ಟಿ ಇಲ್ಲಿದೆ. ಅಧಿಕಾರ ವಹಿಸಿಕೊಳ್ಳುವ ಮುನ್ನ ಜನತೆಗೆ ನೀಡಿದ ಪ್ರಣಾಳಿಕೆ ಹಾಗೂ ಏನೆನೆಲ್ಲ ಸಾಧಿಸಿದ್ದೇನೆ ಎಂಬುದರ ಬಗ್ಗೆ ತಿಳಿಸುತ್ತೇನೆ.
9.5 ವರ್ಷಗಳ ಕಾಲ ಪಂಜಾಬ್ ಗೃಹ ಸಚಿವನಾಗಿ ಸೇವೆ ಸಲ್ಲಿಸಿದ್ದೇನೆ. ಆದರೆ 1 ತಿಂಗಳು ಗೃಹ ಸಚಿವರಾಗಿ ಸೇವೆ ಸಲ್ಲಿಸಿದವರು ನನಗಿಂತ ಜಾಸ್ತಿ ತಿಳಿದವರಂತೆ ಮಾತನಾಡುತ್ತಾರೆ ಎಂದು ಟಾಂಗ್ ಕೊಟ್ಟರು.
ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಅವರ ಹಿತಾಸಕ್ತಿಗಾಗಿ ಪರಿಹರಿಸಿದರೆ 2022 ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.