Sunday, 23rd June 2024

ಮುಖ್ಯಮಂತ್ರಿಯಾಗಿ ನನ್ನ ಅವಧಿ ಪೂರೈಸಲಿದ್ದೇನೆ: ಬೊಮ್ಮಾಯಿ ವಿಶ್ವಾಸ

ನವದೆಹಲಿ: ರಾಜ್ಯದ ಮುಖ್ಯಮಂತ್ರಿಯಾಗಿ ನನ್ನ ಅವಧಿ ಪೂರೈಸಲಿದ್ದೇನೆ. 2023ರ ವಿಧಾನಸಭೆ ಚುನಾವಣೆ ನನ್ನ ನೇತೃತ್ವದಲ್ಲೇ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ದೆಹಲಿಯಲ್ಲಿ ನಡೆದ ಇಂಡಿಯಾ ಕಾನ್ ಕ್ಲೇವ್ ನಲ್ಲಿ ಮಾತನಾಡಿ, ಉತ್ತಮ ಆಡಳಿತ ನೀಡುವ ಜತೆಗೆ ಮತ್ತೊಂದು ಅವಧಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇನೆ. ನನಗೆ ದೊರಕಿರುವ ಈ ಅವಧಿಯಲ್ಲಿ ಉತ್ತಮ ಆಡಳಿತ ನೀಡಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುತ್ತೇನೆ,” ಎಂದು ಹೇಳಿದರು.

ಬಿಜೆಪಿ ಈಗ ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಸಮಾಜದ ಎಲ್ಲ ವರ್ಗದವರನ್ನೂ ತಲುಪಿ ಅವರ ಬೆಂಬಲ ಪಡೆದ ಪಕ್ಷವಾಗಿದೆ. ಉತ್ತರ ಕರ್ನಾಟಕದಿಂದ ಲಿಂಗಾಯತ ಸಮುದಾಯದ ಹಲವು ಮಂದಿ ಬಿಜೆಪಿ ಶಾಸಕರು, ಸಂಸದರಾಗಿದ್ದಾರೆ ಎಂದು ತಿಳಿಸಿ ದರು.

ಭಾರತೀಯ ಜನತಾ ಪಕ್ಷ ಈಗ ಕರ್ನಾಟಕದಲ್ಲಿ ಕೇವಲ ಒಂದು ಸಮು ದಾಯಕ್ಕೆ ಸೀಮಿತವಾಗಿಲ್ಲ. ಅದು ಸಮಾಜದ ಎಲ್ಲ ವರ್ಗದವರಿಗೂ ತಲುಪಿ ಅವರ ಬೆಂಬಲವನ್ನು ಗಳಿಸಿರುವ ಪಕ್ಷವಾಗಿದೆ ಎಂದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು, ಅವರು ಮುಂದಿನ ಜನಾಂಗಕ್ಕೆ ಅವಕಾಶ ಮಾಡಿ ಕೊಟ್ಟಿದ್ದಾರೆ. ಅವರೊಬ್ಬ ಪ್ರಬಲ ನಾಯಕ. ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಅವರು ಮುಂದಿನ ಜನಾಂಗಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಬಸವರಾಜ್‌ ಬೊಮ್ಮಾಯಿ ಹೇಳಿದರು.

ರಾಮಕೃಷ್ಣ ಹೆಗ್ಡೆ ಮತ್ತು ಎಸ್ ಆರ್ ಬೊಮ್ಮಾಯಿ ಅವರಂತಹ ನಾಯಕರುಗಳು ಸಹ ಪಕ್ಷ ತೊರೆದು ಬಿಜೆಪಿ ಸೇರಬೇಕಾಯಿತು, ರಾಜಕೀಯ ಮತ್ತು ನಾಯಕತ್ವದ ಹಾದಿ ಈ ಎಲ್ಲಾ ಬದಲಾವಣೆಗಳಿಗೆ ಮಾರ್ಗದರ್ಶನ ನೀಡಿದೆ” ಎಂದು ಹೇಳಿದರು.

ಮೊದಲು ಅಬಕಾರಿ ಲಾಬಿ ಇತ್ತು, ನಂತರ ಗ್ರಾನೈಟ್ ಲಾಬಿ, ಶಿಕ್ಷಣ ಲಾಬಿ ಬಂತು. ಈ ನಡುವೆ ಗಣಿಗಾರಿಕೆ ಲಾಬಿ ಇತ್ತು. ಈ ಎಲ್ಲಾ ಲಾಬಿಗಳು ಯಾವಾಗಲೂ ಪ್ರಾಬಲ್ಯ ಸಾಧಿಸಲು ಪ್ರಯತ್ನಿಸುತ್ತವೆ. ಹಣದ ಬಲದೊಂದಿಗೆ ರಾಜ್ಯದ ರಾಜಕೀಯ ನಡೆಯುತ್ತದೆ ಎಂಬುದನ್ನು ಒಪ್ಪಿಕೊಂಡರು.

Leave a Reply

Your email address will not be published. Required fields are marked *

error: Content is protected !!