Saturday, 14th December 2024

ವಿಮಾನದಲ್ಲಿ ಸಂಚರಿಸುವಾಗಲೇ ಮಗುವಿಗೆ ಜನ್ಮ ನೀಡಿದ ತಾಯಿ

ನವದೆಹಲಿ: ಬೆಂಗಳೂರು-ಜೈಪುರ ನಡುವೆ ಸಂಚರಿಸುತ್ತಿದ್ದ ಇಂಡಿಗೊ ವಿಮಾನದಲ್ಲಿ ಬುಧವಾರ ಗರ್ಭಿಣಿಯೊಬ್ಬರು ಮಗುವಿಗೆ ಜನ್ಮ ನೀಡಿದ್ದಾರೆ.

ಬೆಂಗಳೂರಿನಿಂದ ಜೈಪುರಕ್ಕೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಅದೇ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೈದ್ಯೆ ಡಾ.ಸುಬಹಾನಾ ನಜೀರ್ ಅವರು, ವಿಮಾನದ ಸಿಬ್ಬಂದಿಯ ನೆರವಿನಿಂದ ಮಹಿಳೆಗೆ ಸುಸೂತ್ರವಾಗಿ ಹೆರಿಗೆ ಮಾಡಿಸಿದ್ದಾರೆ’ ಆಕಾಶದಲ್ಲಿ ವಿಮಾನ ಸಂಚರಿಸುವ ವೇಳೆಯಲ್ಲೇ ವೈದ್ಯರು ಹೆರಿಗೆ ಮಾಡಿಸಿದ್ದಾರೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯ ವಾಗಿದ್ದಾರೆ’ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

ಬೆಂಗಳೂರಿನಿಂದ ಬೆಳಿಗ್ಗೆ  ಟೇಕ್ ಆಫ್ ಆದ ಇಂಡಿಗೊ ವಿಮಾನ, ಜೈಪುರದಲ್ಲಿ ಇಳಿಯಿತು. ಇದಕ್ಕೂ ಮೊದಲು ವಿಮಾನ ಸಿಬ್ಬಂದಿ, ಜೈಪುರ ವಿಮಾನ ನಿಲ್ದಾಣದಲ್ಲಿ ಆಂಬುಲೆನ್ಸ್ ಮತ್ತು ವೈದ್ಯರ ವ್ಯವಸ್ಥೆ ಮಾಡುವಂತೆ ಮಾಹಿತಿ ನೀಡಿದ್ದರು.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily