ಈ ಮೂಲಕ ಬೋಗ್‌ತುಇ ಗ್ರಾಮದಲ್ಲಿ ಮನೆಗಳಿಗೆ ಬೆಂಕಿ ಹಚ್ಚಿದ ಘಟನೆ ಯಲ್ಲಿ ಮೃತ ಪಟ್ಟವರ ಒಟ್ಟು ಸಂಖ್ಯೆ 10ಕ್ಕೆ ಏರಿಕೆ ಯಾಗಿದೆ. ಶೇ 27ರಷ್ಟು ಸುಟ್ಟ ಗಾಯಗಳೊಂದಿಗೆ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಪೊಲೀಸ್ ಅಧಿಕಾರಿ ಯೊಬ್ಬರು ತಿಳಿಸಿದ್ದಾರೆ.
‘ಆಕೆಯ ಸ್ಥಿತಿ ಸುಧಾರಿಸಿದ ನಂತರ ಡಿಸ್ಚಾರ್ಜ್ ಮಾಡಲಾಗಿತ್ತು. ಆದರೆ, ಮತ್ತೆ ಆರೋಗ್ಯ ಸ್ಥಿತಿ ಹದಗೆಟ್ಟ ನಂತರ ಮತ್ತೊಮ್ಮೆ ರಾಮ್‌ಪುರಹಾಟ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಅವರು ಭಾನುವಾರ ಮೃತಪಟ್ಟಿದ್ದಾರೆ ಎಂದು ಹೇಳಿದರು.
ಟಿಎಂಸಿ ಸದಸ್ಯನ ಹತ್ಯೆಯ ನಂತರ ಬೋಗ್‌ತುಇ ಗ್ರಾಮದ ಹತ್ತಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ ಹಚ್ಚಲಾಗಿತ್ತು. ಈ ಕೃತ್ಯದಲ್ಲಿ ಇಬ್ಬರು ಮಕ್ಕಳು, ಐವರು ಮಹಿಳೆಯರು ಸೇರಿ ಎಂಟು ಜನರನ್ನು ಸಜೀವವಾಗಿ ಸುಡಲಾಗಿತ್ತು.