ನವದೆಹಲಿ : ದೆಹಲಿ ಗಡಿಯಲ್ಲಿ ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಸೋಮವಾರ ನಾರಿಯರ ಬೆಂಬಲ ದೊರೆಯಿತು.
ವಿಶ್ವ ಮಹಿಳಾ ದಿನ ಸಾವಿರಾರು ಸಂಖ್ಯೆಯಲ್ಲಿ ನಾರಿಯರು ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ 100 ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಗೆ ಕೈ ಜೋಡಿಸಿದ್ದಾರೆ. ಪಂಜಾಬ್, ಹರಿಯಾಣ ಹಾಗೂ ಉತ್ತರ ಪ್ರದೇಶಗಳಿಂದ ಆಗಮಿಸಿದ ರೈತ ಮಹಿಳೆಯರು ಪ್ರತಿಭಟನೆಯ ಕಿಚ್ಚು ಹೆಚ್ಚಿಸಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿರುವ ನಾರಿಯರು, ಮೂರು ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿದ್ದಾರೆ.
ರೈತರ ಪ್ರತಿಭಟನೆಗೆ ಮಹಿಳೆಯರು ಪಾಲ್ಗೊಳ್ಳುವಂತೆ ಭಾರತೀಯ ಕಿಸಾನ್ ಒಕ್ಕೂಟ ಕರೆ ನೀಡಿತ್ತು. ಪ್ರತಿಭಟನಾ ಸ್ಥಳಕ್ಕೆ ಕರೆ ತರಲು 500 ಬಸ್, 600 ಮಿನಿ ಬಸ್ ಹಾಗೂ 115 ಟ್ರಕ್ ವ್ಯವಸ್ಥೆ ಮಾಡಲಾಗಿತ್ತು. ವಿವಿಧ ರಾಜ್ಯಗಳಿಂದ ಬಂದಿರುವ ರೈತ ಮಹಿಳೆಯರು ಇಂದಿನ ಪ್ರತಿಭಟನೆ ನೇತೃತ್ವ ವಹಿಸಿಕೊಂಡಿದ್ದಾರೆ. ಪ್ರತಿಭಟನಾ
ಇನ್ನು ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಕಳೆದ ನವೆಂಬರ್ ತಿಂಗಳಿನಿಂದ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಯುತ್ತಿದೆ. ಸರ್ಕಾರ ಹಾಗೂ ರೈತರ ನಡುವೆ ಇದುವರೆಗೆ ನಡೆದ ಹಲವು ಸಂಧಾನಗಳೂ ಫಲ ನೀಡಿಲ್ಲ. ಛಲ ಬಿಡದ ರೈತರೂ ಸಾವಿರ ದಿನಗಳ ವರೆಗೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.