ಬಂಗಾ ಅವರು ಮಾ.23, 24 ರಂದು ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಸೇರಿದಂತೆ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದರು.
ದೆಹಲಿಗೆ ಬಂದಿಳಿದ ಅವರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ಪರೀಕ್ಷೆಯಲ್ಲಿ ಅಜಯ್ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ಫೆ.23ರಂದು ಅಜಯ್ ಬಾಂಗಾ ಅವರನ್ನು ವಿಶ್ವ ಬ್ಯಾಂಕ್‌ನ ಅಧ್ಯಕ್ಷ ಸ್ಥಾನಕ್ಕೆ ಅಮೆರಿಕವು ನಾಮ ನಿರ್ದೇಶನ ಮಾಡಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ತಿಳಿಸಿದ್ದರು.
63 ವರ್ಷದ ಅಜಯ್ ಅವರು ಈ ಹಿಂದೆ ಮಾಸ್ಟರ್‌ಕಾರ್ಡ್‌ನ ಅಧ್ಯಕ್ಷ ಹಾಗೂ ಸಿಇಒ ಆಗಿ ಕೆಲಸ ಮಾಡಿದ್ದರು. ಸದ್ಯ ಅವರು ಜನರಲ್ ಅಟ್ಲಾಂಟಿಕ್‌ನ ಉಪಾಧ್ಯಕ್ಷರಾಗಿದ್ದಾರೆ. 2016ರಲ್ಲಿ ಅವರಿಗೆ ಪದ್ಮಶ್ರೀ ಗೌರವ ಒಲಿದಿತ್ತು.
ವಿಶ್ವ ಬ್ಯಾಂಕ್ ಅಧ್ಯಕ್ಷ ಅಜಯ್ ಬಾಂಗಾ ಅವರಿಗೆ ಕೋವಿಡ್ ದೃಢಪಟ್ಟಿದ್ದು, ಎರಡು ದಿನಗಳ ಭಾರತ ಪ್ರವಾಸದ ವೇಳೆ ನಿಗದಿಯಾಗಿದ್ದ ಅವರ ಸಭೆಗಳನ್ನು ರದ್ದುಗೊಳಿಸಲಾಗಿದೆ.