Tuesday, 23rd April 2024

ಕುಸ್ತಿಪಟುಗಳ ಬೆಂಬಲಿಸಿ ಸಂಯುಕ್ತ ಕಿಸಾನ್ ಮೋರ್ಚಾ ಪ್ರತಿಭಟನೆಗೆ ಕರೆ

ವದೆಹಲಿ: ಭಾರತದ ಕುಸ್ತಿ ಫೆಡರೇಷನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸು ತ್ತಿರುವ ಕುಸ್ತಿಪಟುಗಳನ್ನು ಬೆಂಬಲಿಸಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿದೆ.

ರಾಷ್ಟ್ರ ರಾಜಧಾನಿಯತ್ತ ರೈತರು ಮುನ್ನುಗ್ಗುತ್ತಿರುವುದನ್ನು ಗಮನಿಸಿರುವ ದೆಹಲಿ ಪೊಲೀಸರು ಗುರುವಾರ ದೆಹಲಿಯ ಗಡಿ ಭಾಗಗಳಲ್ಲಿ ಭಾರೀ ಬಿಗಿ ಭದ್ರತೆಯನ್ನು ಕೈಗೊಂಡಿದ್ದಾರೆ.

ಭದ್ರತಾ ಸಿಬ್ಬಂದಿ ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸುತ್ತಿದ್ದಾರೆ. ಯಾವುದೇ ಅಹಿತಕರ ಘಟನೆಯನ್ನು ತಡೆಯಲು ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ನಾವು ಬಯಸುತ್ತೇವೆ. ಇದನ್ನು ಮುನ್ನೆಚ್ಚರಿಕೆ ಕ್ರಮವಾಗಿ ಮಾಡಲಾಗಿದೆ’ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ. ಅಕ್ಕಪಕ್ಕದ ರಾಜ್ಯಗಳಿಂದ ದೆಹಲಿ ಪ್ರವೇಶಿಸುವ ವಾಹನಗಳನ್ನು ಗಡಿ ಯಲ್ಲಿ ತಪಾಸಣೆ ನಡೆಸಲಾಗುತ್ತಿದೆ ಎಂದರು.

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸುತ್ತಿರುವ ಕುಸ್ತಿಪಟುಗಳನ್ನು ಬೆಂಬಲಿಸಿ ರೈತ ಸಂಘಗಳ ಮಾತೃಸಂಸ್ಥೆಯಾದ ಎಸ್‌ಕೆಎಂ ಜೂನ್ 1 ರಂದು ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿದೆ.

ಸಿಂಗ್ ಬಂಧನಕ್ಕೆ ಆಗ್ರಹಿಸಿ ಏಪ್ರಿಲ್ 23 ರಿಂದ ಜಂತರ್ ಮಂತರ್‌ನಲ್ಲಿ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದರು. ಅದೇ ದಿನ ಉದ್ಘಾಟನೆಗೊಂಡ ಹೊಸ ಸಂಸತ್ ಭವನದ ಮುಂದೆ ಮೆರವಣಿಗೆ ಮಾಡಲು ಯತ್ನಿಸಿದ ನಂತರ ಭಾನುವಾರ ದೆಹಲಿ ಪೊಲೀಸರು ಅವರನ್ನು ಬಂಧಿಸಿ ನಂತರ ಕೈಬಿಟ್ಟರು.

error: Content is protected !!