ಏಕನಾಥ್ ಶಿಂಧೆ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್, ಡಿಜಿಪಿ ರಜನೀಶ್ ಸೇಠ್ ಮತ್ತು ಇತರರಿಗೆ ಬರೆದ ಪತ್ರದಲ್ಲಿ ಬಂಡಾಯ ಶಾಸಕರ ಕುಟುಂಬ ಸದಸ್ಯರಿಗೆ ನೀಡಲಾಗಿದ್ದ ಭದ್ರತೆ ಹಿಂಪಡೆ ಯಲಾಗಿದೆ ಎಂದು ಆರೋಪಿಸಿ, ಒಂದು ದಿನದ ನಂತರ ಇದು ಬೆಳವಣಿಗೆ ಬಂದಿದೆ. ಆದರೆ ಮಹಾ ವಿಕಾಸ್ ಅಘಾಡಿ ಸರ್ಕಾರ ಈ ಆರೋಪಗಳನ್ನು ತಿರಸ್ಕರಿಸಿತ್ತು.
ಜೂ. 23ರಂದು ಮಹಾರಾಷ್ಟ್ರದ ಬಂಡಾಯ ಶಾಸಕರು ತಂಗಿರುವ ಹೋಟೆಲ್ ಮುಂದೆ ಟಿಎಂಸಿ ಪಕ್ಷದ ಕಾರ್ಯಕರ್ತರು ಪ್ರತಿ ಭಟನೆ ನಡೆಸಿದ್ದರು. ಅಸ್ಸಾಂನ ಟಿಎಂಸಿ ಮುಖ್ಯಸ್ಥ ರಿಪುನ್ ಬೋರಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸ ಲಾಗಿದೆ. ಟಿಎಂಸಿ ಪ್ರತಿಭಟನೆ ಹಿನ್ನೆಲೆ ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
ಮಹಾರಾಷ್ಟ್ರದಲ್ಲಿ ಮಹಾವಿಕಾಸ ಅಘಾಡಿ ಮೈತ್ರಿಕೂಟದ ಮುಖ್ಯಮಂತ್ರಿ ಉದ್ದವ್ ಠಾಕ್ರೆಯ ಸರ್ಕಾರ ಬೀಳಿಸಲು ಅಸ್ಸಾಂ ಬಿಜೆಪಿ ಸರ್ಕಾರ ನೆರವಾಗುತ್ತಿದೆ. ಹೀಗಾಗಿ ಶಿವಸೇನೆಯ ಬಂಡಾಯ ಶಾಸಕರಿಗೆ ಆತಿಥ್ಯ ನೀಡುತ್ತಿದೆ ಎಂದು ಟಿಎಂಸಿ ಆರೋಪಿಸಿದೆ.
ಅಸ್ಸಾಂನಲ್ಲಿ ಸುರಿದ ಮಳೆಯಿಂದಾಗಿ ಜನಜೀವನ ಅಸ್ಯವ್ಯಸ್ತವಾಗಿದ್ದು, ರಾಜ್ಯದಲ್ಲಿ ಪ್ರಾಕೃತಿಕ ವಿಕೋಪ ಸಂಭವಿಸಿದೆ. 55 ಲಕ್ಷಕ್ಕೂ ಹೆಚ್ಚು ಮಂದಿ ಸಂತ್ರಸ್ತರಾಗಿದ್ದು, 89 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಬಗ್ಗೆ ಮಾತನಾಡದ ಅಸ್ಸಾಂ ಸರ್ಕಾರ ಈಗ ಮಹಾರಾಷ್ಟ್ರ ಬಂಡಾಯ ಶಾಸಕರನ್ನು ಐಷಾರಾಮಿ ಹೋಟೆಲ್‌ನಲ್ಲಿ ಇಟ್ಟು ಸಲುಹುತ್ತಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದಾರೆ.