ನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಜಂಟಿ ಅಭ್ಯರ್ಥಿ ಯಾಗಿ ಸ್ಪರ್ಧಿಸಲು ತೃಣಮೂಲ ಕಾಂಗ್ರೆಸ್ ತೊರೆಯು ತ್ತಿರುವುದಾಗಿ ಕೇಂದ್ರದ ಮಾಜಿ ಸಚಿವ ಯಶವಂತ ಸಿನ್ಹಾ ಹೇಳಿದ್ದಾರೆ.
ಪ್ರತಿಪಕ್ಷಗಳಿಂದ ರಾಷ್ಟ್ರಪತಿ ಚುನಾವಣೆಗೆ ಜಂಟಿ ಅಭ್ಯರ್ಥಿಯಾಗಿ ಆಯ್ಕೆ ಯಾಗಬೇಕಿದ್ದರೆ ಪಕ್ಷದ ಸದಸ್ಯತ್ವ ತೊರೆಯಬೇಕು ಎಂದು ಕಾಂಗ್ರೆಸ್ ಮತ್ತು ಎಡಪಕ್ಷಗಳು ಆಗ್ರಹಿಸಿದ್ದವು. ಹೀಗಾಗಿ ಸಭೆಗೂ ಮುನ್ನವೇ ಸಿನ್ಹಾ ಅವರು ಟಿಎಂಸಿ ತೊರೆಯುವ ನಿರ್ಧಾರ ಕೈಗೊಂಡಿದ್ದಾರೆ.
‘ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರು ಪಕ್ಷದಲ್ಲಿ ನೀಡಿದ ಗೌರವ ಮತ್ತು ಪ್ರತಿಷ್ಠೆಗೆ ಆಭಾರಿಯಾಗಿದ್ದೇನೆ. ರಾಷ್ಟ್ರೀಯ ಹಿತಾಸಕ್ತಿಗಾಗಿ ಮತ್ತು ಪ್ರತಿಪಕ್ಷಗಳ ಒಗ್ಗಟ್ಟಿಗಾಗಿ ಪಕ್ಷ ತ್ಯಜಿಸಬೇಕಾದ ಅನಿವಾ ರ್ಯತೆ ಎದುರಾಗಿದೆ. ನನ್ನ ನಿರ್ಧಾರವನ್ನು ಅವರು ಗೌರವಿಸುತ್ತಾರೆ ಎಂಬ ಭರವಸೆ ಇದೆ’ ಎಂದು ಸಿನ್ಹಾ ಟ್ವೀಟ್ ಮಾಡಿದ್ದಾರೆ.
ರಾಷ್ಟ್ರಪತಿ ಚುನಾವಣೆಗೆ ಸಿನ್ಹಾ ಅವರನ್ನು ಜಂಟಿ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ವಿರೋಧ ಪಕ್ಷಗಳ ಕೆಲವು ನಾಯಕರು ಪ್ರಸ್ತಾಪಿಸಿದ್ದು, ಬೆಂಬಲವನ್ನೂ ವ್ಯಕ್ತಪಡಿಸಿದ್ದಾರೆ.