Friday, 22nd November 2024

ಶಾಲಾ ಪಠ್ಯಕ್ರಮದಲ್ಲಿ ಯೋಗ ಸೇರ್ಪಡೆ: ಮನೋಹರ್‌ ಲಾಲ್‌ ಖಟ್ಟರ್‌

ಚಂಡೀಗಡ: ಪ್ರಸಕ್ತ ಶೈಕ್ಷಣಿಕ ವರ್ಷದಿಂದ 1 ರಿಂದ 10ನೇ ತರಗತಿವರೆಗಿನ ಪಠ್ಯಕ್ರಮದಲ್ಲಿ ಯೋಗ ವಿಷಯವನ್ನು ಸೇರ್ಪಡೆ ಮಾಡಲಾಗಿದೆ’ ಎಂದು ಹರಿಯಾಣ ಸರಕಾರ ಸೋಮವಾರ ತಿಳಿಸಿದೆ.

ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮುಖ್ಯಮಂತ್ರಿ ಮನೋಹರ್‌ ಲಾಲ್‌ ಖಟ್ಟರ್‌ ಅವರು, ಯೋಗವು ಮಕ್ಕಳ ದೈನಂದಿನ ಜೀವನದ ಭಾಗವಾಗಿರಬೇಕು ಎಂಬ ನಿಟ್ಟಿ ನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದರು.

ಸೈದ್ಧಾಂತಿಕ ಮತ್ತು ಪ್ರಾಯೋಗಿಕ ವಿಷಯಗಳನ್ನು ಒಳಗೊಂಡಿರುವ ರೀತಿಯಲ್ಲಿ ದೈಹಿಕ ಶಿಕ್ಷಣದ ಮಾದರಿಯಲ್ಲಿ ಯೋಗದ ಪಠ್ಯಕ್ರಮ ವಿನ್ಯಾಸಗೊಳಿಸಲಾಗುವುದು’ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

1,000 ಗ್ರಾಮಗಳಲ್ಲಿ ವ್ಯಾಯಾಮ ಶಾಲೆಗಳನ್ನು ತೆರೆಯಲು ನಿರ್ಧರಿಸಲಾಗಿದೆ. ಈವರೆಗೆ 550 ಗ್ರಾಮಗಳಲ್ಲಿ ವ್ಯಾಯಾಮ ಶಾಲೆಗಳನ್ನು ಆರಂಭಿಸಲಾಗಿದೆ. 1,000 ಯೋಗ ತರಬೇತುದಾರರು ಮತ್ತು 22 ಕೋಚ್‌ಗಳನ್ನು ನೇಮಿಸಲಾಗುವುದು’ ಎಂದು ತಿಳಿಸಿದರು.