ಮುಂಬೈ:ಕಳೆದ ತಿಂಗಳು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಮಹಾರಾಷ್ಟ್ರ ಮಾಜಿ ಸಚಿವ ಬಾಬಾ ಸಿದ್ದಿಕಿ(Baba Siddiqui) ಹತ್ಯೆ ಬೆನ್ನಲ್ಲೇ ಇದೀಗ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(Yogi Adityanath) ಅವರಿಗೂ ಜೀವ ಬೆದರಿಕೆ ಬಂದಿದೆ. ಮುಂಬೈ ಪೊಲೀಸರಿಗೆ ಈ ಸಂದೇಶ ಬಂದಿದ್ದು, ಇನ್ನು 10ದಿನಗಳೊಳಗಾಗಿ ಯೋಗಿ ಆದಿತ್ಯನಾಥ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡದೇ ಇದ್ದಲ್ಲಿ ಅವರನ್ನು ಬಾಬಾ ಸಿದ್ದಿಕಿಯ ಹತ್ಯೆಯ ರೀತಿಯಲ್ಲೇ ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಬಂದಿದೆ.
ಮುಂಬೈ ಪೊಲೀಸ್ ಟ್ರಾಫಿಕ್ ಕಂಟ್ರೋಲ್ ಸೆಲ್‌ಗೆ ಶನಿವಾರ ಸಂಜೆ ಅಪರಿಚಿತ ಸಂಖ್ಯೆಯಿಂದ ಸಂದೇಶ ಬಂದಿದೆ. ಸಂದೇಶವನ್ನು ಯಾರು ಕಳುಹಿಸಿದ್ದಾರೆ ಎಂಬುದನ್ನು ಕಂಡುಹಿಡಿಯಲು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಇನ್ನೂ ಎಫ್‌ಐಆರ್ ದಾಖಲಾಗಬೇಕಿದೆ. ಸಂದೇಶದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಅಕ್ಟೋಬರ್ 12 ರಂದು ಅವರ ಮಗ ಜೀಶನ್ ಸಿದ್ದಿಕ್ ಅವರ ಕಚೇರಿಯ ಹೊರಗೆ ಬಾಬಾ ಸಿದ್ದಿಕ್ ಅವರನ್ನು ಮೂವರು ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದರು. ಈ ಹತ್ಯೆಯ ಹೊಣೆಯನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೊತ್ತುಕೊಂಡಿತ್ತು. ಇದರ ಬೆನ್ನಲ್ಲೇ ಬಾಲಿವುಡ್ ನಟ ಸಲ್ಮಾನ್ ಖಾನ್ ಹತ್ಯೆಗೂ ಬೆದರಿಕೆ ಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬುಧವಾರ (ಅಕ್ಟೋಬರ್ 30) ಬಂಧಿಸಲಾಗಿತ್ತು. ಇದಾದ ಕೆಲವೇ ದಿನಗಳಲ್ಲಿ ಇದೀಗ ಯೋಗಿಗೆ ಈ ಬೆದರಿಕೆ ಬಂದಿದೆ.
ಅದೇ ರೀತಿ, ಸಲ್ಮಾನ್ ಖಾನ್ ಮತ್ತು ಬಾಬಾ ಸಿದ್ದಿಕ್ ಅವರ ಪುತ್ರ, ಬಾಂದ್ರಾ ಪೂರ್ವ ಎನ್‌ಸಿಪಿ ಶಾಸಕ ಜೀಶನ್ ಸಿದ್ದಿಕ್‌ಗೆ ಬೆದರಿಕೆ ಹಾಕಿದ್ದಕ್ಕಾಗಿ 20 ವರ್ಷದ ವ್ಯಕ್ತಿಯನ್ನು ನೋಯ್ಡಾದಲ್ಲಿ ಮಂಗಳವಾರ (ಅಕ್ಟೋಬರ್ 29) ಬಂಧಿಸಲಾಗಿತ್ತು. ಮೊಹಮ್ಮದ್ ತಯ್ಯಬ್ ಎಂದು ಗುರುತಿಸಲಾದ ಆರೋಪಿಗಳು ಜೀಶನ್ ಸಿದ್ದಿಕ್ ಮತ್ತು ಸಲ್ಮಾನ್ ಖಾನ್ ಅವರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ
66 ವರ್ಷದ ಎನ್‌ಸಿಪಿ ನಾಯಕನ ಮೇಲೆ ಮುಂಬೈನ ಬಾಂದ್ರಾ ಪ್ರದೇಶದ ಖೇರ್ ನಗರದಲ್ಲಿ ಅವರ ಶಾಸಕ ಪುತ್ರ ಜೀಶಾನ್ ಸಿದ್ದಿಕಿ ಅವರ ಕಚೇರಿಯ ಹೊರಗೆ ಮೂವರು ವ್ಯಕ್ತಿಗಳು ದಾಳಿ ನಡೆಸಿದ್ದಾರೆ. ಆಘಾತಕಾರಿ ಸಂಗತಿಯೆಂದರೆ ದಸರಾ ಆಚರಣೆಯ ದಿನದಂದು ಪೊಲೀಸರು ಹೆಚ್ಚಿನ ಎಚ್ಚರಿಕೆ ವಹಿಸಿದ್ದ ದಿನದಂದು ಜನನಿಬಿಡ ರಸ್ತೆಯಲ್ಲಿ ಈ ದಾಳಿ ನಡೆಸಲಾಗಿದೆ. ಗಾಯಗೊಂಡ ಸಿದ್ದಿಕ್ಕಿ ಅವರನ್ನು ತಕ್ಷಣ ಲೀಲಾವತಿ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ: Somy Ali : ಭೂಗತ ಜಗತ್ತಿನ ಬೆದರಿಕೆ ನೆನಪಿಸಿಕೊಂಡ ಸಲ್ಮಾನ್ ಖಾನ್ ಮಾಜಿ ಗೆಳತಿ!