Tuesday, 25th June 2024

ಯೋಗಿ ಆದಿತ್ಯನಾಥ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಲಖನೌ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಭಾನುವಾರ ವಾರಣಾಸಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ.

ಲಕ್ನೊಗೆ ಟೇಕಾಫ್ ಆದ ನಂತರ ಮುಖ್ಯಮಂತ್ರಿಯ ಹೆಲಿಕಾಪ್ಟರ್‌ಗೆ ಹಕ್ಕಿ ಬಡಿದಿದೆ. ಹೀಗಾಗಿ ಹೆಲಿಕಾಪ್ಟರ್ ಇಳಿಯಬೇಕಾಯಿತು ಎಂದು ಜಿಲ್ಲಾ ಮ್ಯಾಜಿ ಸ್ಟ್ರೇಟ್ ಕೌಶಲರಾಜ್ ಶರ್ಮಾ ಹೇಳಿದರು.

ರಸ್ತೆ ಮಾರ್ಗದಲ್ಲಿ ಎಲ್ ಬಿಎಸ್ ಐ ವಿಮಾನ ನಿಲ್ದಾಣಕ್ಕೆ ತೆರಳಿದ ಆದಿತ್ಯ ನಾಥ್ ವಿಮಾನದ ಮೂಲಕ ಲಕ್ನೊಗೆ ತೆರಳಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

error: Content is protected !!