Wednesday, 29th May 2024

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಾಮಪತ್ರ ಸಲ್ಲಿಕೆ ಇಂದು

ನವದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾvಣೆಯು ಚುರುಕುಗೊಂಡಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗೋರಖ್‌ಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುವ ವೇಳೆ ಅವರೊಂದಿಗೆ ತೆರಳಲಿದ್ದಾರೆ.

ಇದೇ ಮೊದಲ ಬಾರಿಗೆ ವಿಧಾನಸಭೆಗೆ ಸ್ಪರ್ಧೆ ಮಾಡುತ್ತಿರುವ ಯೋಗಿ ಆದಿತ್ಯನಾಥ್ ಗೋರಖ್‌ಪುರ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಉಮೇದಾರ ನಾಗಿ ನಾಮಪತ್ರ ಸಲ್ಲಿಸಲಿದ್ದಾರೆ.

ಆದಿತ್ಯನಾಥ್ ಉಮೇದುವಾರಿಕೆಯ ಘೋಷಣೆಯ ನಂತರ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಮೈನ್‌ಪುರಿ ವಿಧಾನಸಭಾ ಕ್ಷೇತ್ರದಲ್ಲಿ ಕರ್ಹಾಲ್‌ನಿಂದ ಸ್ಪರ್ಧಿಸುವುದಾಗಿ ಘೋಷಿಸಿದರು.

2014-20ರಲ್ಲಿ ಬಿಜೆಪಿ ಮುಖ್ಯಸ್ಥರಾಗಿದ್ದ ಅಮಿತ್ ಶಾ ಅವರು ಪಕ್ಷದ ಕಾರ್ಯಕರ್ತರೊಂದಿಗೆ ಸಂಪರ್ಕವನ್ನು ಸ್ಥಾಪಿಸುವ ಯಶಸ್ಸಿನ ಮಂತ್ರವನ್ನು ಬಳಸಿಕೊಂಡು 2014, 2017 ಮತ್ತು 2019 ರಲ್ಲಿ ಪಕ್ಷಕ್ಕೆ ಉತ್ತರ ಪ್ರದೇಶವನ್ನು ಮುದ್ರೆಯೊತ್ತುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3 ಮತ್ತು 7 ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.

error: Content is protected !!