Sunday, 15th December 2024

ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕಾರ ಇಂದು

ಲಕ್ನೋ: ಉತ್ತರ ಪ್ರದೇಶ ರಾಜ್ಯದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

ಈ ಮೂಲಕ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದಿರುವ ಬಿಜೆಪಿ ಶುಕ್ರವಾರದಿಂದ ರಾಜ್ಯದಲ್ಲಿ ಆಡಳಿತ ನಡೆಸಲಿದೆ. 403 ಸದಸ್ಯ ಬಲದ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 255 ಸ್ಥಾನಗಳಲ್ಲಿ ಜಯಗಳಿಸಿದೆ.

ಗುರುವಾರ ಶಾಸಕಾಂಗ ಪಕ್ಷದ ಸಭೆಯಲ್ಲಿ ಯೋಗಿ ಆದಿತ್ಯನಾಥ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ.

ಶುಕ್ರವಾರ ಸಂಜೆ ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಬಿಜೆಪಿ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ 2ನೇ ಅವಧಿಗೆ ಯೋಗಿ ಆದಿತ್ಯನಾಥ್ ಆಯ್ಕೆ ಯಾಗಿದ್ದಾರೆ. 2017ರ ಚುನಾವಣೆಯಲ್ಲಿ ಪಕ್ಷ ಜಯಗಳಿಸಿದಾಗ ಮಾರ್ಚ್ 17ರಂದು ಅವರು ಮೊದಲ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು.