Monday, 14th October 2024

ವಿಡಿಯೋ ಮಾಡುತ್ತಿದ್ದಾಗ ರೈಲಿಗೆ ಡಿಕ್ಕಿ: ಯುವಕರ ಸಾವು

ಚೆನ್ನೈ: ಇನ್‌ಸ್ಟಾಗ್ರಾಮ್​ನಲ್ಲಿ ವಿಡಿಯೋ ಅಪ್ಲೋಡ್ ಮಾಡಲು ಮೂವರು ಯುವಕರು​ ರೈಲ್ವೆ ಹಳಿ ಮೇಲೆ ನಿಂತು ವಿಡಿಯೋ ಮಾಡುತ್ತಿದ್ದಾಗ ದಿಢೀರ್​ ಆಗಮಿಸಿದ ರೈಲಿಗೆ ಬಲಿಯಾಗಿದ್ದಾರೆ.

ಚೆಂಗಲ್ಪಟ್ಟು ಪಕ್ಕದ ಚೆಟ್ಟಿಪುನ್ನಿಯಂ ಪ್ರದೇಶದ ಅಶೋಕ್ ಕುಮಾರ್, ಪ್ರಕಾಶ್ ಮತ್ತು ಮೋಹನ್ ಎಂಬುವರು ಮೃತ ವಿದ್ಯಾರ್ಥಿಗಳು. ಆಗಾಗ ಸೆಲ್ಫಿ ವಿಡಿಯೋ ಮಾಡಿ ಇನ್ ಸ್ಟಾಗ್ರಾಮ್​ನಲ್ಲಿ ಹಾಕುತ್ತಿದ್ದರು.

ಮೂವರು ರೈಲು ಹಳಿ ಮೇಲೆ ನಿಂತು ವಿಡಿಯೋ ಮಾಡುತ್ತಿದ್ದಾಗ ಚೆನ್ನೈನಿಂದ ಚೆಂಗಲ್ಪಟ್ಟಿಗೆ ಬರುತ್ತಿದ್ದ ರೈಲು ಡಿಕ್ಕಿ ಹೊಡೆ ದಿದೆ. ಪರಿಣಾಮ ಯುವಕರ ಮೃತದೇಹ ಸ್ಥಳದಲ್ಲೇ ಚೆಲ್ಲಾಪಿಲ್ಲಿಯಾಗಿದ್ದು, ಧಾರುಣವಾಗಿ ಮೃತಪಟ್ಟಿ ದ್ದಾರೆ.

ಚೆಂಗಲ್ಪಟ್ಟು ರೈಲ್ವೆ ಪೊಲೀಸರು ಯುವಕರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.