Friday, 20th September 2024

ಲೀವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಯೂಟ್ಯೂಬರ್‌ ಜೋಡಿ ಆತ್ಮಹತ್ಯೆ

ಚಂಡೀಗಢ: ಲೀವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಯೂಟ್ಯೂಬರ್‌ ಜೋಡಿ ಕಟ್ಟಡದ 7ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಿಯಾಣದ ಬಹದ್ದೂರ್‌ಗಢದಲ್ಲಿ ನಡೆದಿದೆ.

ಮೃತರನ್ನುಗಾರ್ವಿತ್‌ (25) ಮತ್ತು ನಂದಿನಿ (22) ಎಂದು ಗುರುತಿಸಲಾಗಿದೆ. ದೆಹಲಿಯಿಂದ ಸುಮಾರು 20 ಕಿ.ಮೀ. ದೂರದಲ್ಲಿರುವ ಬಹದ್ದೂರ್‌ಗಢದಲ್ಲಿ ಈ ದುರಂತ ಸಂಭವಿಸಿದೆ.

ಗರ್ವಿತ್ ಮತ್ತು ನಂದಿನಿ ಇಬ್ಬರೂ ಯೂಟ್ಯೂಬ್‌ ಕಂಟೆಂಟ್‌ ಕ್ರಿಯೇಟರ್ಸ್‌ ಆಗಿದ್ದರು. ತಮ್ಮದೇ ಚಾನಲ್‌ ನಡೆಸುತ್ತಿದ್ದ ಈ ಜೋಡಿ ಯೂಟ್ಯೂಬ್‌ ಮತ್ತು ಫೇಸ್‌ಬುಕ್‌ನಂತಹ ಸಾಮಾಜಿಕ ಜಾಲತಾಣ ಫ್ಲಾಟ್‌ಫಾರ್ಮ್‌ಗಳಿಗಾಗಿ ಕಿರುಚಿತ್ರ ತಯಾರಿಸುತ್ತಿತ್ತು ಎಂದು ಮೂಲಗಳು ತಿಳಿಸಿವೆ.

ʼʼಕೆಲವು ದಿನಗಳ ಹಿಂದೆ ಇವರು ತಮ್ಮ ತಂಡದೊಂದಿಗೆ ಡೆಹ್ರಾಡೂನ್‌ನಿಂದ ಬಹದ್ದೂರ್‌ಗಢಕ್ಕೆ ಸ್ಥಳಾಂತರಗೊಂಡಿದ್ದರು. ಅವರು ಬಹು ಮಹಡಿ ಕಟ್ಟಡವೊಂದರ ಏಳನೇ ಮಹಡಿಯಲ್ಲಿನ ಫ್ಲಾಟ್ ಅನ್ನು ಬಾಡಿಗೆಗೆ ಪಡೆದಿದ್ದರು. ಅಲ್ಲಿ ಅವರು ತಮ್ಮ ಐದು ಸಹೋದ್ಯೋಗಿಗಳೊಂದಿಗೆ ವಾಸಿಸುತ್ತಿದ್ದರುʼʼ ಎಂದು ಪೊಲೀಸರು ತಿಳಿಸಿದ್ದಾರೆ.