ಶರ್ಮಿಳಾ ತೆಲಂಗಾಣ ರಾಜ್ಯಾದ್ಯಂತ ಪಾದಯಾತ್ರೆ ಮುಂದಾಗಿದ್ದರು. ಆದರೆ, ಇದಕ್ಕೆ ಕೆಸಿಆರ್ ಸರ್ಕಾರ ಅನುಮತಿ ನೀಡಲಿಲ್ಲ. ಇದರಿಂದ ಬೇಸರಗೊಂಡ ವೈಎಸ್‌ಆರ್‌ಟಿಪಿ ಪಕ್ಷದವರು ಹಾಗೂ ಶರ್ಮಿಳಾ ಪಕ್ಷದ ಪ್ರಧಾನ ಕಚೇರಿಯಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದರು.
ಉಪವಾಸ ಸತ್ಯಾಗ್ರಹ ಕೈ ಬಿಡುವಂತೆ ಪೊಲೀಸರು ಪಕ್ಷದ ಮುಖಂಡರು ಮತ್ತು ಕಾರ್ಯ ಕರ್ತರಿಗೆ ಮನವಿ ಮಾಡಿದರೂ, ಯಾವುದೇ ಪ್ರಯೋಜನವಾಗಲಿಲ್ಲ. ಉಪವಾಸ ಸತ್ಯಾ ಗ್ರಹ ಪ್ರಾರಂಭವಾಗಿ 3 ದಿನವಾಗಿತ್ತು. ಶರ್ಮಿಳಾ ಅವರು ನೀರನ್ನು ಸಹ ಸೇವಿಸದ ಕಾರಣ ಅವರ ಆರೋಗ್ಯ ಸ್ಥಿತಿ ಶೀಘ್ರವಾಗಿ ಹದಗೆಡುತ್ತಿದೆ ಎಂದು ಅದು ಹೇಳಿ, ಪೊಲೀಸರು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ದೂರ ಸರಿಸಿ ಶರ್ಮಿಳಾರನ್ನು ಆಸ್ಪತ್ರೆಗೆ ದಾಖ ಲಿಸಿದ್ದಾರೆ.
ಅವಿಭಜಿತ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈಎಸ್ ರಾಜಶೇಖರ ರೆಡ್ಡಿ ಅವರ ಪುತ್ರಿ ಶರ್ಮಿಳಾ ಶುಕ್ರವಾರ ಹುಸೇನ್ ಸಾಗರ ಕೆರೆ ಬಳಿಯ ಅಂಬೇಡ್ಕರ್ ಪ್ರತಿಮೆಗೆ ಮನವಿ ಪತ್ರ ಸಲ್ಲಿಸಿ ತಮ್ಮ ‘ಪಾದಯಾತ್ರೆ’ಗೆ ಅನುಮತಿ ನಿರಾಕರಿಸಿರುವುದನ್ನು ವಿರೋಧಿಸಿ ಉಪವಾಸ ಸತ್ಯಾಗ್ರಹ ನಡೆಸಲು ಯತ್ನಿಸಿದರು.