Monday, 16th May 2022

9,195 ನೂತನ ಕೋವಿಡ್ ಸೋಂಕು ಪ್ರಕರಣ ಪತ್ತೆ

covid

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 9,195 ನೂತನ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದೆ. 302 ಮಂದಿ ಮೃತಪಟ್ಟಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.

ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,48,08,886ಕ್ಕೆ ಏರಿಕೆಯಾಗಿದೆ. ಅಲ್ಲದೇ ಮೃತರ ಸಂಖ್ಯೆ 4,80,592ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 77,002ಕ್ಕೆ ತಲುಪಿದೆ.

ಕಳೆದ 24 ಗಂಟೆಗಳಲ್ಲಿ 7,347 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,42,51,292ಕ್ಕೆ ತಲುಪಿದೆ.

ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 143.15 ಕೋಟಿ ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.