Friday, 27th May 2022

ಕರೋನಾ, ಒಮೈಕ್ರಾನ್ ಆರ್ಭಟ: ಸಂಜೆ 6 ಗಂಟೆಗೆ ತಜ್ಞರ ಸಭೆ

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕರೋನಾ, ಒಮೈಕ್ರಾನ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಕ್ರಮ ಕೈಗೊಳ್ಳುವ ಕುರಿತಂತೆ ಮಂಗಳವಾರ ಸಂಜೆ 6 ಗಂಟೆಗೆ ತಜ್ಞರ ಜೊತೆಗೆ ಮಹತ್ವದ ಸಭೆ ನಡೆಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರಾಜ್ಯದಲ್ಲಿ ಕರೋನಾ ತಡೆಗೆ ಬೇಕಾದ ಕ್ರಮಕೈಗೊಳ್ಳಲು ಸಂಜೆ 6 ಗಂಟೆಗೆ ತಜ್ಞರ ಜೊತೆಗೆ ಮಹತ್ವದ ಸಭೆ ನಡೆಸಲಾಗುತ್ತದೆ. ಸಭೆಯಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ ಎಂದರು.

ದೇಶದಲ್ಲಿ, ನೆರೆ ರಾಜ್ಯಗಳಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ.ನಮಗೆ ಕೊರೊನಾ 2 ನೇ ಅಲೆ ಅನುಭವವಿದೆ. ಹೀಗಾಗಿ ಜನಜೀವನಕ್ಕೆ ಸಮಸ್ಯೆಯಾಗ ದಂತೆ ಕ್ರಮ ಕೈಗೊಳ್ಳಲಾಗುವುದು. ಜನರು ಕೂಡ ನಿಯಮಗಳನ್ನು ಪಾಲಿಸಬೇಕು ಎಂದರು.