Tuesday, 9th August 2022

ಮಹಾರಾಷ್ಟ್ರ ರಾಜ್ಯಪಾಲರಿಗೆ ಕರೋನಾ ಸೋಂಕು

ಮುಂಬೈ: ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರಿಗೆ ಕರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಕುರಿತು ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನನಗೆ ಕೋವಿಡ್ ಪಾಸಿಟಿವ್ ಆಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಮುಂಬೈನ ಎಚ್‌ಎನ್‌ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ದಾಖಲಾಗಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.

ಸರ್ಕಾರದ ರಾಜಕೀಯ ಅಸ್ಥಿರತೆ ಕುರಿತಂತೆ ಹಲವು ಬೆಳವಣಿಗೆಗಳು ನಡೆದಿದ್ದು, ಇಂದು ರಾಜ್ಯ ಸಚಿವ ಸಂಪುಟ ಸಭೆ ಕರೆಯಲಾಗಿದೆ. ಶಿವಸೇನಾ ಶಾಸಕ ಮತ್ತು ಬಂಡಾಯ ನಾಯಕ ಏಕನಾಥ್ ಶಿಂಧೆ ಅವರು ತಮಗೆ 40 ಶಾಸಕರ ಬೆಂಬಲ ಇದೆ ಎಂದು ತಿಳಿಸಿರುವುದು ಮಹಾರಾಷ್ಟ್ರದಲ್ಲಿ ದೊಡ್ಡ ಬಿರುಗಾಳಿ ಎಬ್ಬಿಸಿದೆ.