Thursday, 19th May 2022

ನಗರ ಪೊಲೀಸ್ ಆಯುಕ್ತ ಕಮಲ್ ಪಂತ್’ಗೂ ಕರೋನಾ ದೃಢ

ಬೆಂಗಳೂರು: ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೂ ಕರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಿಂದ ದೃಢಪಟ್ಟಿದೆ.

ಹೀಗಾಗಿ ಹೋಂ ಐಸೋಲೇಷನ್ ಆಗಿರುವಂತ ಅವರು, ಒಂದು ವಾರ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯ ಲಿದ್ದಾರೆ. ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್ ಅಶೋಕ್, ಜೆ.ಸಿ.ಮಾಧು ಸ್ವಾಮಿ ಸೇರಿದಂತೆ ಅನೇಕರ ಸಚಿವರಿಗೆ ಪಾಸಿಟಿವ್ ದೃಢಪಟ್ಟಿತ್ತು.

ಈ ನಡುವೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೂ ಪಾಸಿಟಿವ್ ಎಂದು ಪರೀಕ್ಷೆಯಿಂದ ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಮನೆಯಲ್ಲಿಯೇ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೋವಿಡ್ ಸೋಂಕಿನಿಂದಾಗಿ ಹೋಂ ಐಸೋಲೇಷನ್ ಆಗಿರುವ ಕಮಲ್ ಪಂತ್ ಅವರು, ಮುಂದಿನ ಒಂದು ವಾರ ಮನೆಯಲ್ಲಿಯೇ ಐಸೋಲೇಷನ್ ನಲ್ಲಯೇ ಚಿಕಿತ್ಸೆಯನ್ನು ಪಡೆಯಲಿದ್ದಾರೆ ಎಂದು ತಿಳಿದು ಬಂದಿದೆ.