Wednesday, 28th July 2021

ನಾಳೆಯಿಂದ ಕೋವಿಡ್ ಲಸಿಕಾ ಉತ್ಸವ, ಸಕಲ ಸಿದ್ದತೆ: ಸಚಿವ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ : ಕೊರೊನಾ ವೈರಸ್ ನಿಯಂತ್ರಣಕ್ಕೆ ರಾಜ್ಯದಲ್ಲಿ ನಾಳೆಯಿಂದ ಏ.14 ರವರೆಗೆ 4 ದಿನಗಳ ಕೋವಿಡ್ ಲಸಿಕಾ ಉತ್ಸವ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಏ.11 ರಂದು ಜ್ಯೋತಿ ಬಾ ಪುಲೆ ಜನ್ಮದಿನ ಹಾಗೂ ಏ.14 ಬಾಬಾ ಸಾಹೇಬ್ ಅಂಬೇಡ್ಕರ್ ಜನ್ಮ ದಿನಾಚರಣೆಯವರೆಗೂ ರಾಜ್ಯದಲ್ಲಿ ಕೋವಿಡ್ ಲಸಿಕಾ ಉತ್ಸವ ಜರುಗಲಿದೆ. ಜನ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಪಡೆದುಕೊಳ್ಳ ಬೇಕು ಎಂದು ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ 8 ನಗರಗಳಲ್ಲಿ ಇಂದು ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಏ.20 ರವರೆಗೆ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ ಎಂದು ಹೇಳಿದರು.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily

Leave a Reply

Your email address will not be published. Required fields are marked *