Monday, 15th August 2022

ಶೂಟಿಂಗ್ ಆರಂಭಿಸಿದ ಕ್ರೀಂ

ಕನ್ನಡ ಚಿತ್ರರಂಗದ ಮಟ್ಟಿಗೆ ವಿಭಿನ್ನ ಚಿತ್ರಕಥೆಯನ್ನು ಒಳಗೊಂಡಿರುವ ಕ್ರೀಂ ಚಿತ್ರದ ಚಿತ್ರೀಕರಣ ಆರಂಭವಾಗಿದೆ. ಅಗ್ನಿ ಶ್ರೀಧರ್ ಕಥೆ, ಚಿತ್ರಕಥೆ ಬರೆದಿರುವ ಈ ಸಿನಿಮಾ ವನ್ನು ಅಭಿಷೇಕ್ ಬಸಂತ್ ನಿರ್ದೇಶಿಸುತ್ತಿದ್ದಾರೆ.

ಸಂವರ್ದಿನಿ ಪ್ರೊಡಕ್ಷನ್ಸ್ ಮೂಲಕ ಕ್ರೀಂ ನಿರ್ಮಾಣವಾಗುತ್ತಿದೆ. ಈ ಚಿತ್ರಕ್ಕಾಗಿಯೇ ಕಂಠೀರವ ಸ್ಟುಡಿಯೋದಲ್ಲಿ ಅದ್ಧೂರಿ ಸೆಟ್ ನಿರ್ಮಾಣವಾಗಿದ್ದು, ಅಲ್ಲಿಯೇ ಶೂಟಿಂಗ್ ನಡೆಸಲಾಗುತ್ತಿದೆ. ಕೆಜಿಎಫ್ ಖ್ಯಾತಿಯ ಶಿವಕುಮಾರ್ ಕಲಾ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಸಂಯುಕ್ತಾ ಹೆಗ್ಡೆ, ಅರುಣ್ ಸಾಗರ್, ಅಚ್ಯುತ್ ಕುಮಾರ್ ಚಿತ್ರದಲ್ಲಿ ನಟಿಸುತ್ತಿದ್ದು, ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ.

ಚಿತ್ರದ ಪ್ರಮುಖ ಪಾತ್ರದಲ್ಲಿ ಪ್ರಸಿದ್ಧ ನಟರೊಬ್ಬರು ಅಭಿನಯಿಸುತ್ತಿದ್ದು ಆ ಬಗ್ಗೆ ಚಿತ್ರತಂಡ ಎಲ್ಲಿಯೂ ಗುಟ್ಟುಬಿಟ್ಟುಕೊಟ್ಟಿಲ್ಲ. ಕ್ರೀಂ ನೈಜಘಟನೆ ಆಧರಿಸಿದ ಸಿನಿಮಾ ವಾಗಿದೆ. ಈ ಚಿತ್ರದಲ್ಲಿ ಸಂಯುಕ್ತಾ ಹೆಗ್ಡೆ, ಬಾಕ್ಸಿಂಗ್ ಪಟುವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದಕ್ಕಾಗಿ ತರಬೇತಿಯನ್ನು ಪಡೆದಿದ್ದಾರೆ. ಸುನೋಜ್ ವೇಲಾಯುದನ್ ಛಾಯಾಗ್ರಹಣ, ಸುರಾಗ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಚಿತ್ರದ ಶೂಟಿಂಗ್ ಭರದಿಂದ ಸಾಗಿದ್ದು, ಈ ವರ್ಷದ ಅಂತ್ಯದಲ್ಲಿ ಚಿತ್ರ ತೆರೆಗೆ ಬರುವ ಸಾಧ್ಯತೆ ಇದೆ.