ಇಂದು ಪಂಜಾಬ್ ಕಿಂಗ್ಸ್-ಕೋಲ್ಕತ ನೈಟ್ರೈಡರ್ಸ್ ಫೈಟ್
IPL 2025: ಬ್ಯಾಟಿಂಗ್ ವಿಭಾಗದಲ್ಲಿ ಪಂಜಾಬ್ ಬಲಿಷ್ಠವಾಗಿದೆ. ಆರಂಭಿಕರಾದ ಪ್ರಿಯಾಂಶ್ ಆರ್ಯ ಮತ್ತು ಪ್ರಭುಸಿಮ್ರಾನ್ ಸಿಂಗ್ ಜೋಡಿ ಆಕ್ರಮಣಕಾರಿ ಬ್ಯಾಟಿಂಗ್ ಮೂಲಕ ಪವರ್ ಪ್ಲೇಯಲ್ಲಿ ದೊಡ್ಡ ಮೊತ್ತವನ್ನು ಪೇರಿಸುತ್ತಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ನಾಯಕ ಶ್ರೇಯಸ್ ಅಯ್ಯರ್, ಮಾರ್ಕಸ್ ಸ್ಟೋಯಿನಿಸ್, ಶಶಾಂಕ್ ಸಿಂಗ್ ಉತ್ತಮ ಬ್ಯಾಟಿಂಗ್ ನಡೆಸುತ್ತಿದ್ದಾರೆ.