ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

10ನೇ ತರಗತಿ ವಿದ್ಯಾರ್ಥಿನಿಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ: ನೊಂದ ಬಾಲಕಿ ಆತ್ಮಹತ್ಯೆಗೆ ಶರಣು

Self-harming: ಶಿಕ್ಷಕನ ಲೈಂಗಿಕ ಕಿರುಕುಳದಿಂದ ಬೇಸತ್ತ 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ನಡೆದಿದೆ. ಶಿಕ್ಷಕ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ. ಸದ್ಯ ಈ ಘಟನೆಗೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ.

ಸಾಂದರ್ಭಿಕ ಚಿತ್ರ

ಚೆನ್ನೈ, ಸೆ. 11: ಶಿಕ್ಷಕನ ಲೈಂಗಿಕ ಕಿರುಕುಳದಿಂದ ಬೇಸತ್ತ 10 ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ (Tamil Nadu) ಕಲ್ಲಕುರಿಚಿ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಶಿಕ್ಷಕನನ್ನು ಬಂಧಿಸಲಾಗಿದೆ. ಆರೋಪಿಯನ್ನು ಜಗದೀಶನ್ ಎಂದು ಗುರುತಿಸಲಾಗಿದ್ದು, ಆತನನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಅಥವಾ ಪೋಕ್ಸೊ ಕಾಯ್ದೆಯಡಿಯಲ್ಲಿ ಬಂಧಿಸಲಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ (crime news).

ಶಿಕ್ಷಕ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ ಎಂಬುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಾಲಕಿಯ ಸಾವಿನ ಬಗ್ಗೆ ಮತ್ತು ಶಿಕ್ಷಕನ ವಿರುದ್ಧದ ಆರೋಪಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ತಮಿಳುನಾಡಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿಯುತ್ತಿದೆ. ಕೊಲೆಗಳು ಮತ್ತು ಮಹಿಳೆಯರ ಮೇಲಿನ ಅಪರಾಧಗಳು, ಕಸ್ಟಡಿ ಸಾವುಗಳು ಮತ್ತು ಮರ್ಯಾದಾ ಹತ್ಯೆಗಳು ಸೇರಿದಂತೆ ಅಪರಾಧಗಳು ಹೆಚ್ಚುತ್ತಿವೆ ಎಂದು ವಿರೋಧ ಪಕ್ಷಗಳು ಪ್ರಶ್ನೆ ಎತ್ತುತ್ತಿರುವ ನಡುವೆಯೇ ಈ ಘಟನೆ ನಡೆದಿದೆ.

ಆಸ್ಪತ್ರೆಯ ಮುಖ್ಯ ದ್ವಾರಕ್ಕೆ ಬೀಗ; ಹಿಂಬದಿಯಿಂದ ಬಾಗಿಲು ತೆರೆದು ಚಿಕಿತ್ಸೆ: ಉತ್ತರ ಪ್ರದೇಶದಲ್ಲಿ ಹೆರಿಗೆ ವೇಳೆ ತಾಯಿ, ಮಗು ಸಾವು

ವಿಧಾನಸಭೆಯ ಅನುದಾನ ಬೇಡಿಕೆ ಮೇಲಿನ ಚರ್ಚೆಯ ಸಂದರ್ಭದಲ್ಲಿ ಸರ್ಕಾರದ ಕಾನೂನು ಮತ್ತು ಸುವ್ಯವಸ್ಥೆ ನಿರ್ವಹಣೆಯನ್ನು ಪ್ರಮುಖವಾಗಿ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಪ್ರಶ್ನಿಸಿದ್ದಾರೆ. ವಿಧಾನಸಭೆಯಲ್ಲಿ ಅನುದಾನ ಬೇಡಿಕೆ ಚರ್ಚೆಯ ಸಂದರ್ಭದಲ್ಲಿ ಉದಯನಿಧಿ ಸ್ಟಾಲಿನ್ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಮುಖ್ಯಮಂತ್ರಿ ವಿಜಯ್, ಪ್ರತಿಯೊಂದು ಅಪರಾಧವನ್ನು ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆ ಎಂದು ನಿರೂಪಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಕಾನೂನು ಮತ್ತು ಸುವ್ಯವಸ್ಥೆಯ ಬಗೆಗಿನ ದೃಷ್ಟಿಕೋನ ಬದಲಾಗಬೇಕು ಎಂದು ಅವರು ಹೇಳಿದರು. ಅಪರಾಧಗಳನ್ನು ತಡೆಗಟ್ಟುವುದು ಮತ್ತು ಅಪರಾಧಿಗಳನ್ನು ಕಾನೂನಿನಡಿ ಶಿಕ್ಷಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಅವರು ಒತ್ತಿ ಹೇಳಿದರು.

ಕಳೆದ 100 ದಿನಗಳ ತಮ್ಮ ಸರ್ಕಾರದ ಆಡಳಿತಾವಧಿಯೊಂದಕ್ಕೇ ಎಲ್ಲ ಅಪರಾಧಗಳನ್ನು ಹೊರಿಸಲು ಸಾಧ್ಯವಿಲ್ಲ ಎಂದೂ ಮುಖ್ಯಮಂತ್ರಿ ಹೇಳಿದರು. ಅಲ್ಲದೆ, ಮಾದಕ ದ್ರವ್ಯಗಳ ದುರುಪಯೋಗವನ್ನು ತಡೆಗಟ್ಟುವಲ್ಲಿ ವಿಫಲವಾಗಿರುವುದಕ್ಕಾಗಿ ಅವರು ಹಿಂದಿನ ಡಿಎಂಕೆ ಸರ್ಕಾರದ ಮೇಲೆಯೇ ಆರೋಪ ಹೊರಿಸಿದ್ದಾರೆ.