ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಆಸ್ಪತ್ರೆಯ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ 14 ವರ್ಷದ ಬಾಲಕಿ; ನವಜಾತ ಶಿಶುವಿನ ರಕ್ಷಣೆ

newborn baby rescued: 14 ವರ್ಷದ ಬಾಲಕಿಯೊಬ್ಬಳು ಶೌಚಾಲಯದೊಳಗೆ ಮಗುವಿಗೆ ಜನ್ಮ ನೀಡಿದ್ದು, ನವಜಾತ ಶಿಶು ಶೌಚಾಲಯದ ಪ್ಯಾನ್‌ನಲ್ಲಿ ಸಿಲುಕಿಕೊಂಡ ಘಟನೆ ಜಾರ್ಖಂಡ್‌ನ ಗಿರಿದಿಹ್‌ನ ಸದರ್ ಆಸ್ಪತ್ರೆಯಲ್ಲಿ ನಡೆದಿದೆ. ಈ ಘಟನೆ ಆಸ್ಪತ್ರೆಯ ಆವರಣದಲ್ಲಿ ಆತಂಕ ಮೂಡಿಸಿದೆ. ಬಾಲಕಿ ವಾರ್ಡ್ ಪ್ರದೇಶದ ಶೌಚಾಲಯದಿಂದ ಚಿಂತಾಜನಕ ಸ್ಥಿತಿಯಲ್ಲಿ ಹೊರಬರುತ್ತಿರುವುದು ಕಂಡುಬಂದಿದೆ.

ಆಸ್ಪತ್ರೆಯ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ 14 ವರ್ಷದ ಬಾಲಕಿ

ಆಸ್ಪತ್ರೆಯ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ 14 ವರ್ಷದ ಬಾಲಕಿ -

Priyanka P
Priyanka P May 23, 2026 4:09 PM

ರಾಂಚಿ, ಮೇ 23: 14 ವರ್ಷದ ಬಾಲಕಿಯೊಬ್ಬಳು ಶೌಚಾಲಯದೊಳಗೆ ಮಗುವಿಗೆ ಜನ್ಮ ನೀಡಿದ್ದು, ನವಜಾತ ಶಿಶು (newborn baby) ಶೌಚಾಲಯದ ಪ್ಯಾನ್‌ನಲ್ಲಿ ಸಿಲುಕಿಕೊಂಡ ಘಟನೆ ಜಾರ್ಖಂಡ್‌ನ (Jharkhand) ಗಿರಿದಿಹ್‌ನ ಸದರ್ ಆಸ್ಪತ್ರೆಯಲ್ಲಿ ನಡೆದಿದೆ. ಈ ಘಟನೆ ಆಸ್ಪತ್ರೆಯ ಆವರಣದಲ್ಲಿ ಆತಂಕ ಮೂಡಿಸಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಅಪ್ರಾಪ್ತ ವಯಸ್ಕ ಬಾಲಕಿ ವಾರ್ಡ್ ಪ್ರದೇಶದ ಶೌಚಾಲಯದಿಂದ ಚಿಂತಾಜನಕ ಸ್ಥಿತಿಯಲ್ಲಿ ಹೊರಬರುತ್ತಿರುವುದು ಕಂಡುಬಂದಿದೆ. ಶೌಚಾಲಯದ ಒಳಗೆ ಮತ್ತು ಹೊರಗೆ ರಕ್ತ ಇರುವುದನ್ನು ಗಮನಿಸಿದ ಅಲ್ಲಿದ್ದವರು, ಏನೋ ತಪ್ಪಾಗಿದೆ ಎಂದು ಅನುಮಾನಿಸಿ ಆಸ್ಪತ್ರೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ಬಾಲಕಿ ಆಸ್ಪತ್ರೆಯಿಂದ ಹೊರಬರಲು ಪ್ರಯತ್ನಿಸಿದಳು. ಆದರೆ ತಲೆತಿರುಗುವಿಕೆ ಉಂಟಾಗಿದ್ದರಿಂದ ಸ್ವಲ್ಪ ದೂರದಲ್ಲಿ ಕುಸಿದು ಬಿದ್ದಳು ಎಂದು ಹೇಳಲಾಗಿದೆ. ನಂತರ ಆಸ್ಪತ್ರೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು. ನಂತರ ಪಟ್ಟಣ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿದರು.

ಪೊಲೀಸರು ಮತ್ತು ಆಸ್ಪತ್ರೆ ಸಿಬ್ಬಂದಿ ಶೌಚಾಲಯವನ್ನು ಪರಿಶೀಲಿಸಿದಾಗ, ನವಜಾತ ಶಿಶು ಪ್ಯಾನ್‌ನಲ್ಲಿ ಸಿಲುಕಿಕೊಂಡಿರುವುದು ಕಂಡುಬಂದಿದೆ. ಇದನ್ನು ಗಮನಿಸಿದ ವೈದ್ಯರು, ಆಸ್ಪತ್ರೆ ಸಿಬ್ಬಂದಿ ಮತ್ತು ಪೊಲೀಸ್ ಸಿಬ್ಬಂದಿ ಒಟ್ಟಾಗಿ ಮಗುವನ್ನು ಸುರಕ್ಷಿತವಾಗಿ ರಕ್ಷಿಸಲು ಶ್ರಮಿಸಿದರು. ನಂತರ ಆಂಬ್ಯುಲೆನ್ಸ್‌ಗೆ ಕರೆ ಮಾಡಲಾಯಿತು. ಅಪ್ರಾಪ್ತ ತಾಯಿ ಮತ್ತು ನವಜಾತ ಶಿಶುವನ್ನು ಚಿಕಿತ್ಸೆಗಾಗಿ ಚೈತಾದಿಹ್‌ನಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.

Chinthamani Crime: ಮರೀನಾಯಕನಹಳ್ಳಿ ಗೇಟ್ ಬಳಿ ಅಕ್ರಮ ದಂಧೆಗೆ ಬ್ರೇಕ್: ಮೂವರ ವಿರುದ್ಧ ಪ್ರಕರಣ ದಾಖಲು!

ಆಸ್ಪತ್ರೆಯ ಉಪ ಅಧೀಕ್ಷಕ ಡಾ. ಪ್ರದೀಪ್ ಬೈತಾ ಅವರು, ಇಬ್ಬರನ್ನೂ ದಾಖಲಿಸಲಾಗಿದ್ದು, ವೈದ್ಯಕೀಯ ನಿಗಾದಲ್ಲಿದ್ದಾರೆ ಎಂದು ಹೇಳಿದರು. ತಾಯಿ ಮತ್ತು ನವಜಾತ ಶಿಶುವಿನ ಸ್ಥಿತಿ ಪ್ರಸ್ತುತ ಸಾಮಾನ್ಯವಾಗಿದೆ ಎಂದು ಅವರು ಹೇಳಿದರು.

ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಪಟ್ಟಣ ಪೊಲೀಸ್ ಠಾಣೆಯ ಉಸ್ತುವಾರಿ ರತನ್ ಕುಮಾರ್ ಸಿಂಗ್ ಎಂದು ಹೇಳಿದ್ದಾರೆ. ಬಾಲಕಿಯ ವಯಸ್ಸು ಮತ್ತು ಪ್ರಕರಣದ ಎಲ್ಲಾ ಅಂಶಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

4 ವರ್ಷದ ಬಾಲಕ ರಕ್ಷಣೆ ವೇಳೆ 2022ರಿಂದ ನಾಪತ್ತೆಯಾಗಿದ್ದ ಮತ್ತೊಂದು ಮಗು ಪತ್ತೆ

ಬಿಹಾರದಲ್ಲಿ ಅಪಹರಣಕ್ಕೊಳಗಾಗಿದ್ದ ನಾಲ್ಕು ವರ್ಷದ ಬಾಲಕನನ್ನು ರಕ್ಷಿಸಲು ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯು, 2022ರಿಂದ ನಾಪತ್ತೆಯಾಗಿದ್ದ ಮತ್ತೊಂದು ಅಪ್ರಾಪ್ತ ಮಗುವನ್ನು ಅತ್ಯಂತ ಅನಿರೀಕ್ಷಿತವಾಗಿ ಪತ್ತೆಹಚ್ಚಲು ನೆರವಾಗಿದೆ. ಈ ಅಪರೂಪದ ಘಟನೆ ಬಿಹಾರದ ಔರಂಗಾಬಾದ್ ಜಿಲ್ಲೆಯಲ್ಲಿ ನಡೆದಿದೆ.

ಮೇ 16ರಂದು ಅಪಹರಣಕ್ಕೊಳಗಾಗಿದ್ದ ಅದ್ವಿಕ್ ಎಂಬ ನಾಲ್ಕು ವರ್ಷದ ಬಾಲಕನನ್ನು ರಕ್ಷಿಸಲು ಪೊಲೀಸರು ಓಬ್ರಾದಲ್ಲಿ ಆರೋಪಿ ರಂಜೂ ದೇವಿ ಎಂಬಾಕೆಯ ನಿವಾಸದ ಮೇಲೆ ದಿಢೀರ್ ದಾಳಿ ನಡೆಸಿದ್ದರು. ಈ ಯಶಸ್ವಿ ದಾಳಿಯ ಸಂದರ್ಭದಲ್ಲಿ ಪೊಲೀಸರು ಅದ್ವಿಕ್‌ನನ್ನು ಸುರಕ್ಷಿತವಾಗಿ ರಕ್ಷಿಸಿದರು. ಇದೇ ವೇಳೆ ಆ ಮನೆಯಲ್ಲಿ ಮತ್ತೊಂದು ಚಿಕ್ಕ ಮಗು ಪತ್ತೆಯಾದಾಗ ಪೊಲೀಸ್ ತಂಡಕ್ಕೆ ದೊಡ್ಡ ಅಚ್ಚರಿ ಕಾದಿತ್ತು. ತೀವ್ರ ತನಿಖೆಯಿಂದ ಆ ಮಗು 2022ರಲ್ಲಿ ನಾಪತ್ತೆಯಾಗಿದ್ದ ಬಾಲಕ ಎಂದು ಸ್ಪಷ್ಟವಾಗಿ ತಿಳಿದುಬಂದಿದೆ.