ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಪರೀಕ್ಷೆ ಬರೆಯಲು ಬಂದ 16 ವರ್ಷದ ಬಾಲಕಿ ಮಗುವಿಗೆ ಜನ್ಮ ನೀಡಿದಳು

ಪರೀಕ್ಷೆಗೆ ಹಾಜರಾದ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. 16 ವರ್ಷದ ವಿದ್ಯಾರ್ಥಿನಿ ಪರೀಕ್ಷೆಗೆ ಹಾಜರಾದ ಕೆಲವೇ ಗಂಟೆಗಳಲ್ಲಿ ತೀವ್ರ ಹೊಟ್ಟೆ ನೋವಿನ ಬಗ್ಗೆ ದೂರು ನೀಡಿದ್ದಳು ಬಳಿಕ ಸ್ಕ್ಯಾನಿಂಗ್ ಕೇಂದ್ರಕ್ಕೆ ಆಕೆಯನ್ನು ಕರೆದುಕೊಂಡು ಹೋಗಲಾಗಿದ್ದು, ಆಕೆ ಅಲ್ಲಿ ತನ್ನ ಸರದಿಗಾಗಿ ಕಾಯುತ್ತಿದ್ದಾಗ ಶೌಚಾಲಯಕ್ಕೆ ಹೋಗಿದ್ದು, ಅಲ್ಲಿ ಅವಳು ಮಗುವಿಗೆ ಜನ್ಮ ನೀಡಿದ್ದಾಳೆ.

ಸಂಗ್ರಹ ಚಿತ್ರ

ಹೈದರಾಬಾದ್: ತೆಲಂಗಾಣದ (Telangana) ವಿದ್ಯಾರ್ಥಿನಿಯೊಬ್ಬಳು (Telangana Student) ಮಗುವಿಗೆ ಜನ್ಮ ನೀಡಿರುವ ಘಟನೆ ತೆಲಂಗಾಣದ ನಾಗರ್ಕರ್ನೂಲ್‌ನಲ್ಲಿ ನಡೆದಿದೆ. ಬಾಲಕಿಯರ ವಸತಿ ಶಾಲೆಯ (residential girls school) ಪ್ರಥಮ ವರ್ಷದ ಮಧ್ಯಂತರ ವಿದ್ಯಾರ್ಥಿನಿಯಾಗಿರುವ 16 ವರ್ಷದ ವಿದ್ಯಾರ್ಥಿನಿ ಪರೀಕ್ಷೆಗೆ ಹಾಜರಾದ ಕೆಲವು ಗಂಟೆಗಳ ಬಳಿಕ ಮಗುವಿಗೆ ಜನ್ಮ ನೀಡಿದ್ದಾಳೆ. ಆಕೆ ಸೋಮವಾರ ಪರೀಕ್ಷೆ ಹಾಜರಾಗಿದ್ದು, ಬಳಿಕ ಹೊಟ್ಟೆ ನೋವು ಎಂದು ದೂರು ನೀಡಿದ್ದಳು. ಅವಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ್ದಾಳೆ.

16 ವರ್ಷದ ವಿದ್ಯಾರ್ಥಿನಿಗೆ ಸೋಮವಾರ ತೀವ್ರವಾದ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಆಕೆಯನ್ನು ತಾಯಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ವೈದ್ಯರು ಸ್ಕ್ಯಾನ್ ಮಾಡಿಸಲು ಸಲಹೆ ನೀಡಿದ್ದು, ಹತ್ತಿರದ ಕೇಂದ್ರಕ್ಕೆ ಭೇಟಿ ನೀಡಲು ಸೂಚಿಸಿದ್ದರು. ಅಲ್ಲೇ ಬಾಲಕಿ ತನ್ನ ಸರದಿಗಾಗಿ ಕಾಯುತ್ತಿದ್ದಾಗ ಶೌಚಾಲಯಕ್ಕೆ ಹೋಗಿದ್ದು, ಅಲ್ಲೇ ಅವಳಿಗೆ ಹೆರಿಗೆಯಾಗಿದೆ.

Murder Case: ರುಂಡವಿಲ್ಲದ ಮಹಿಳೆಯ ಶವದ ರಹಸ್ಯ ಬಯಲು: ಬಂಗಾರದ ಆಸೆಗಾಗಿ ಕೊಂದ ಪಾಪಿ!

ಸ್ಕ್ಯಾನಿಂಗ್ ಕೇಂದ್ರದ ಸಿಬ್ಬಂದಿ ಶೌಚಾಲಯದೊಳಗೆ ನವಜಾತ ಶಿಶುವನ್ನು ಗಮನಿಸಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ಸ್ಥಳಕ್ಕೆ ಧಾವಿಸಿ ಬಾಲಕಿ ಮತ್ತು ನವಜಾತ ಶಿಶುವನ್ನು ಚಿಕಿತ್ಸೆಗಾಗಿ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಾಲಕಿ ಮತ್ತು ಮಗು ಇಬ್ಬರೂ ಸುರಕ್ಷಿತರಾಗಿದ್ದಾರೆ ಮತ್ತು ವೈದ್ಯಕೀಯ ಆರೈಕೆಯಲ್ಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಸ್ಕ್ಯಾನಿಂಗ್ ಕೇಂದ್ರದ ಸಿಬ್ಬಂದಿ ನೋಡುವ ಮುನ್ನ ಬಾಲಕಿ ಮತ್ತು ಆಕೆಯ ತಾಯಿ ನವಜಾತ ಶಿಶುವನ್ನು ಶೌಚಾಲಯದೊಳಗಿನ ಕಸದ ಬುಟ್ಟಿಯಲ್ಲಿ ಇಟ್ಟಿದ್ದರು. ಬಾಲಕಿ ಅಪ್ರಾಪ್ತಳಾಗಿರುವುದರಿಂದ ಅವರು ಹೆದರಿ ಹೀಗೆ ಮಾಡಿದ್ದಾರೆ ಎನ್ನಲಾಗಿದೆ.

ಬಾಲಕಿ ಹೇಗೆ ಗರ್ಭಿಣಿಯಾದಳು ಎಂಬುದನ್ನು ಪತ್ತೆ ಹಚ್ಚಲು ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸುವ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಹೊಸ ವರ್ಷ ಆರಂಭದ ಬಳಿಕ ಮಧ್ಯಪ್ರದೇಶದ ಧಾರ್‌ನಲ್ಲಿರುವ ಇಂತಹ ಇನ್ನೊಂದು ಪ್ರಕರಣ ನಡೆದಿತ್ತು. ಬೋರ್ಡ್ ಪರೀಕ್ಷೆಯ ವೇಳೆ ಪರೀಕ್ಷಾ ಕೇಂದ್ರದಲ್ಲಿ 10 ನೇ ತರಗತಿಯ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದಳು. 17 ವರ್ಷದ ವಿದ್ಯಾರ್ಥಿನಿ ಪರೀಕ್ಷೆ ಮುಗಿದ ಎರಡು ಗಂಟೆಗಳ ಅನಂತರ ತೀವ್ರ ಹೊಟ್ಟೆನೋವಿನ ಬಗ್ಗೆ ದೂರು ನೀಡಿದ್ದು, ಆಕೆಯನ್ನು ಶೌಚಾಲಯಕ್ಕೆ ಭೇಟಿ ನೀಡಲು ಅನುಮತಿ ನೀಡಲಾಗಿತ್ತು.

KAS Exam Scam: ಕೆಎಎಸ್‌ ಪರೀಕ್ಷೆಯಲ್ಲಿ ಮತ್ತೊಂದು ಅಕ್ರಮ; ಸಂದರ್ಶನಕ್ಕೆ ಒಂದೇ ಕೊಠಡಿಯ 15 ಮಂದಿ ಆಯ್ಕೆ!

ಆಕೆ ಅಲ್ಲಿಂದ ಬಹಳ ಸಮಯದವರೆಗೆ ಹಿಂದಿರುಗದೇ ಇದ್ದಾಗ ಮೇಲ್ವಿಚಾರಕರು ಶೌಚಾಲಯವನ್ನು ಪರಿಶೀಲಿಸಿದರು. ಅಲ್ಲಿ ಮಗು ಅಳುವುದು ಕೇಳಿದೆ. ತಕ್ಷಣವೇ ಶಾಲೆಯ ಮಹಿಳಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬಾಲಕಿ ಮತ್ತು ಶಿಶುವನ್ನು ಆಂಬ್ಯುಲೆನ್ಸ್‌ನಲ್ಲಿ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಬಾಲಕಿ ಎಂಟು ತಿಂಗಳ ಗರ್ಭಿಣಿಯಾಗಿದ್ದು, ಶಿಶು ಅಕಾಲಿಕವಾಗಿ ಜನಿಸಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನೃತ್ಯ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾಗ ಹುಡುಗನೊಬ್ಬ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಬಾಲಕಿ ದೂರಿನಲ್ಲಿ ಪೊಲೀಸರಿಗೆ ತಿಳಿಸಿದ್ದಳು. ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಿದ್ಯಾ ಇರ್ವತ್ತೂರು

View all posts by this author