ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

NEET Aspirant Self Harming: ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

ಭಾಗ್ಯಶ್ರೀ (18) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಮೃತ ವಿದ್ಯಾರ್ಥಿನಿಯು ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 92 ರಷ್ಟು ಅತ್ಯುತ್ತಮ ಅಂಕಗಳನ್ನು ಗಳಿಸಿ ತೇರ್ಗಡೆ ಯಾಗಿದ್ದಳು. ವೈದ್ಯಕೀಯ ಶಿಕ್ಷಣದ ಕನಸು ಕಂಡಿದ್ದ ಆಕೆ, ಇತ್ತೀಚೆಗಷ್ಟೇ ಮೇ 2 ರಂದು ನೀಟ್ ಪರೀಕ್ಷೆ ಬರೆದಿದ್ದಳು ಎನ್ನಲಾಗಿದೆ.

ಕಲಬುರಗಿ: ನೀಟ್ (NEET) ಪರೀಕ್ಷೆ ಬರೆದಿದ್ದ ಯುವತಿ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕೋರ್ಟ್ ವೃತ್ತದ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.

ಭಾಗ್ಯಶ್ರೀ (18) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಮೃತ ವಿದ್ಯಾರ್ಥಿನಿಯು ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 92 ರಷ್ಟು ಅತ್ಯುತ್ತಮ ಅಂಕಗಳನ್ನು ಗಳಿಸಿ ತೇರ್ಗಡೆ ಯಾಗಿದ್ದಳು. ವೈದ್ಯಕೀಯ ಶಿಕ್ಷಣದ ಕನಸು ಕಂಡಿದ್ದ ಆಕೆ, ಇತ್ತೀಚೆಗಷ್ಟೇ ಮೇ 2 ರಂದು ನೀಟ್ ಪರೀಕ್ಷೆ ಬರೆದಿದ್ದಳು ಎನ್ನಲಾಗಿದೆ.

ಇದನ್ನೂ ಓದಿ: Self Harming: ರೈಲಿಗೆ ತಲೆಕೊಟ್ಟು ಯುವಕ ಸಾವಿಗೆ ಶರಣು

ತಂದೆಯ ಕಣ್ಣೀರು: ಪರೀಕ್ಷೆಯ ಆತಂಕದ ಶಂಕೆ

ಘಟನೆಯ ಬಳಿಕ ಮಾಧ್ಯಮಗಳ ಎದುರು ಮೃತಳ ತಂದೆ ರಾಜಶೇಖರ್ ಅವರು ಕಣ್ಣೀರಿ ಡುತ್ತಾ ಅಳಲು ತೋಡಿಕೊಂಡಿದ್ದಾರೆ. ಆಕೆಗೆ ನೀಟ್ ಪರೀಕ್ಷೆಯ ಬಗ್ಗೆ ಬಹಳ ನಿರೀಕ್ಷೆಗಳಿ ದ್ದವು. ಆದರೆ ಒಳಗೊಳಗೇ ಪರೀಕ್ಷೆಯ ಫಲಿತಾಂಶದ ಬಗ್ಗೆ ಏನಾದರೂ ಆತಂಕ ಇತ್ತೋ ಏನೋ ತಿಳಿಯದು. ಆಕೆ ಯಾವುದೇ ಡೆತ್‌ನೋಟ್ ಬರೆದಿಲ್ಲ, ಕಾರಣವನ್ನೂ ಹೇಳಿಲ್ಲ. ಕುಟುಂಬಸ್ಥರ ಜತೆ ತುಂಬಾ ಚೆನ್ನಾಗಿಯೇ ಇದ್ದಳು. ಇವಾಗ ಆಕೆಯೇ ನಮ್ಮನ್ನು ಬಿಟ್ಟು ಹೋಗಿದ್ದಾಳೆ, ನಾವು ಯಾರ ಮೇಲೆ ದೂರೋಣ? ನಾವು ಯಾರ ಮೇಲೆಯೂ ಅಪಾದನೆ ಮಾಡುವುದಿಲ್ಲ ಎಂದು ಅವರು ಅತ್ಯಂತ ದುಃಖದಿಂದ ನುಡಿದಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿ ಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಹಾಗೂ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.