ಐಪಿಎಲ್​ ಸುನಿತಾ ವಿಲಿಯಮ್ಸ್​ ವಿದೇಶ ಫ್ಯಾಷನ್​ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

UP Horror: ಮದುವೆಯಾದ ಎರಡೇ ವಾರಕ್ಕೆ ಪ್ರಿಯಕರನ ಜೊತೆ ಸೇರಿ ಪತಿ ಹತ್ಯೆಗೆ ಸುಪಾರಿ; ಖತರ್ನಾಕ್‌ ಜೋಡಿ ಖಾಕಿ ಬಲೆಗೆ

ಮೀರತ್‌ನಲ್ಲಿ ನಡೆದ ಮರ್ಚೆಂಟ್‌ ನೇವಿ ಅಧಿಕಾರಿ ಹತ್ಯೆ ಪ್ರಕರಣ ಮಾಸುವ ಮುನ್ನ ಮತ್ತೊಂದು ಅಂಹುದೇ ಘಟನೆ ಬೆಳಕಿಗೆ ಬಂದಿದೆ. ಮದುವೆಯಾಗಿ ಎರಡೇ ವಾರಗಳಲ್ಲಿ ಪತ್ನಿಯೊಬ್ಬಳು ಸುಪಾರಿ ನೀಡಿ ಕೊಲೆ ಮಾಡಿಸಿದ್ದಾಳೆ ಎಂಬುದು ತಿಳಿದು ಬಂದಿದೆ.

ಮದುವೆಯಾದ ಎರಡೇ ವಾರಕ್ಕೆ ಪತಿ ಹತ್ಯೆಗೆ ಸುಪಾರಿ ಕೊಟ್ಟ ಪತ್ನಿ

Profile Vishakha Bhat Mar 25, 2025 1:16 PM

ಲಖನೌ: ಮೀರತ್‌ನಲ್ಲಿ ನಡೆದ ಮರ್ಚೆಂಟ್‌ ನೇವಿ ಅಧಿಕಾರಿ ಹತ್ಯೆ ಪ್ರಕರಣ ಮಾಸುವ ಮುನ್ನ ಮತ್ತೊಂದು ಅಂಹುದೇ ಘಟನೆ ಬೆಳಕಿಗೆ ಬಂದಿದೆ. ಮದುವೆಯಾಗಿ ಎರಡೇ ವಾರಗಳಲ್ಲಿ ಪತ್ನಿಯೊಬ್ಬಳು ಸುಪಾರಿ ನೀಡಿ ಕೊಲೆ ಮಾಡಿಸಿದ್ದಾಳೆ ಎಂಬುದು ತಿಳಿದು ಬಂದಿದೆ. 22 ವರ್ಷದ ಮಹಿಳೆಯೊಬ್ಬರು ತನ್ನ ಪ್ರಿಯಕರನೊಂದಿಗೆ ಸೇರಿ, ಗಂಡನ ಕೊಲೆಗೆ ವ್ಯಕ್ತಿಯೊಬ್ಬನಿಗೆ ಸುಪಾರಿ ನೀಡಿದ್ದಾಳೆ ಈ ಘಟನೆ ಉತ್ತರ ಪ್ರದೇಶದ ಔರೈಯಾ (UP Horror) ಜಿಲ್ಲೆಯಲ್ಲಿ ನಡೆದಿದ್ದು, ಮಹಿಳೆ ಹಾಗೂ ಆತನ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಪ್ರಗತಿ ಯಾದವ್‌ ಹಾಗೂ ಮತ್ತು ಅನುರಾಗ್ ಯಾದವ್ ಎಂದು ತಿಳಿದು ಬಂದಿದೆ.

ಪ್ರಗತಿ ಯಾದವ್‌ ಹಾಗೂ ಮತ್ತು ಅನುರಾಗ್ ಯಾದವ್ ಇಬ್ಬರೂ ಕಳೆದ ನಾಲ್ಕು ಪ್ರೀತಿಸುತ್ತಿದ್ದರು. ಆದರೆ ಪ್ರಗತಿಯ ಪೋಷಕರು ಅವರಿಬ್ಬರ ವಿವಾಹಕ್ಕೆ ಒಪ್ಪಿರಲಿಲ್ಲ. ಮಾರ್ಚ್ 5 ರಂದು ಪ್ರಗತಿಯನ್ನು ದಿಲೀಪ್ ಜೊತೆ ಬಲವಂತವಾಗಿ ಮದುವೆ ಮಾಡಿದ್ದರು. ಆದರೆ ಪ್ರಗತಿ ಮದುವೆಯಾಗಿ ಕೆಲವೇ ದಿನಗಳಲ್ಲಿ ಮಾರ್ಚ್‌ 19 ರಂದು ಆಕೆಯ ಪತಿ ದಿಲೀಪ್‌ ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡು ಹೊಲದಲ್ಲಿ ಬಿದ್ದಿದ್ದ. ನಂತರ ಆತನನ್ನು ಮಧ್ಯಪ್ರದೇಶದ ಗ್ವಾಲಿಯರ್‌ಗೆ ಕರೆದೊಯ್ಯಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಮಾರ್ಚ್ 20 ರಂದು ಔರೈಯಾದ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತ ಪಟ್ಟಿದ್ದ. ಘಟನೆಯ ನಂತರ ದಿಲೀಪ್‌ ಸಹೋದರ ಸಹಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ತನಿಖೆ ನಡೆಸಿದ ಪೊಲೀಸರಿಗೆ ಪತ್ನಿಯೇ ಪತಿಯನ್ನು ಕೊಂದಿದ್ದಾಳೆ ಎಂದು ತಿಳಿದು ಬಂದಿದೆ. ದಿಲೀಪ್‌ನನ್ನು ಕೊಲೆ ಮಾಡಲು ರಾಮಾಜಿ ಚೌಧರಿ ಎಂಬಾತನಿಗೆ ಆರೋಪಿಗಳು 2 ಲಕ್ಷ ರೂ.ಗಳ ಸುಪಾರಿ ನೀಡಿದ್ದರು ಎಂದು ತಿಳಿದು ಬಂದಿದೆ. ರಾಮಾಜಿ ಮತ್ತು ಇತರ ಕೆಲವು ಜನರು ದಿಲೀಪ್ ಅವರನ್ನು ಬೈಕ್‌ನಲ್ಲಿ ಹೊಲಗಳಿಗೆ ಕರೆದೊಯ್ದರು, ನಂತರ ಆತನಿಗೆ ಥಳಿಸಿದ್ದಾರೆ. ನಂತರ ಆತನಿಗೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ.

ಈ ಸುದ್ದಿಯನ್ನೂ ಓದಿ: Meerut Murder Case: "ಅಪ್ಪ ಡ್ರಮ್‌ನೊಳಗಿದ್ದಾರೆ," ಎಂದು ನೆರೆಹೊರೆಯವರಿಗೆ ಹೇಳಿದ್ದ ಮೃತ ಮರ್ಚೆಂಟ್ ನೇವಿ ಅಧಿಕಾರಿಯ 6 ವರ್ಷದ ಮಗಳು

ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಮೂವರು ಆರೋಪಿಗಳನ್ನು ಪೊಲೀಸರು ಆತನನ್ನು ಬಂಧಿಸಿದ್ದಾರೆ. ಬಂಧಿತರಿಂದ ಎರಡು ಪಿಸ್ತೂಲ್‌ಗಳು, ನಾಲ್ಕು ಲೈವ್ ಕಾರ್ಟ್ರಿಡ್ಜ್‌ಗಳು, ಒಂದು ಬೈಕ್, ಎರಡು ಮೊಬೈಲ್ ಫೋನ್‌ಗಳು, ಒಂದು ಪರ್ಸ್, ಆಧಾರ್ ಕಾರ್ಡ್ ಮತ್ತು 3,000 ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ. ಸದ್ಯ ಪ್ರಗತಿ ಹಾಗೂ ಆತನ ಸ್ನೇಹಿತನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.