2006ರ ಮಾಲೆಗಾಂವ್ ಸ್ಫೋಟ ಪ್ರಕರಣ: 2 ದಶಕಗಳ ಬಳಿಕ ನಾಲ್ವರು ಆರೋಪಿಗಳ ಖುಲಾಸೆ
ಬರೋಬ್ಬರಿ ಎರಡು ದಶಕಗಳ ಬಳಿಕ ಮಾಲೆಗಾಂವ್ ಸ್ಫೋಟ ಪ್ರಕರಣದ ಎಲ್ಲಾ ನಾಲ್ವರು ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಆರೋಪಿಗಳನ್ನು ಖುಲಾಸೆಗೊಳಿಸುತ್ತಿರುವುದಾಗಿ ಬಾಂಬೆ ಹೈಕೋರ್ಟ್ ತಿಳಿಸಿದೆ. 2006ರ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಒಟ್ಟು 37 ಜನರು ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
ಸಂಗ್ರಹ ಚಿತ್ರ -
ಮುಂಬೈ: ಮಾಲೆಗಾಂವ್ ಸ್ಫೋಟ ಪ್ರಕರಣದ (Malegaon blast case) ಎಲ್ಲಾ ನಾಲ್ವರು ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ಎರಡು ದಶಕಗಳ ಹಿಂದೆ 2006 ರ ಸೆಪ್ಟೆಂಬರ್ 8ರಂದು ನಾಸಿಕ್ ಜಿಲ್ಲೆಯ (Nashik district) ಮಾಲೆಗಾಂವ್‌ನಲ್ಲಿರುವ (Malegaon) ಮುಸ್ಲಿಂ ಸಮುದಾಯಕ್ಕೆ ಸೇರಿದ ಸ್ಮಶಾನದಲ್ಲಿ ಸ್ಫೋಟ ಉಂಟಾಗಿ ಒಟ್ಟು 37 ಜನರು ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್ (Bombay High Court) ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಆರೋಪಿಗಳನ್ನು ಖುಲಾಸೆಗೊಳಿಸುತ್ತಿರುವುದಾಗಿ ತಿಳಿಸಿದೆ.
2006ರ ಮಾಲೆಗಾಂವ್ ಸ್ಫೋಟ ಪ್ರಕರಣದ ನಾಲ್ವರು ಆರೋಪಿಗಳನ್ನು ಸುಮಾರು 20 ವರ್ಷಗಳ ಬಳಿಕ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಖುಲಾಸೆಗೊಳಿಸಲಾಗಿದೆ. ಹಿಂದೆ ಕೂಡ ಕೆಲವು ಆರೋಪಿಗಳನ್ನು ಸಹ ಖುಲಾಸೆಗೊಳಿಸಲಾಗಿತ್ತು. ಹೀಗಾಗಿ ಈ ಪ್ರಕರಣದಲ್ಲಿ ಪ್ರಸ್ತುತ ಯಾರೂ ಕೂಡ ವಿಚಾರಣೆಯನ್ನು ಎದುರಿಸುತ್ತಿಲ್ಲ.
ಹಿಂದೂ ದೇವರ ಅವಹೇಳನ, ಮೈಮುಟ್ಟಿ ಕಿರುಕುಳ; ಬಗೆದಷ್ಟೂ ಹೊರ ಬೀಳುತ್ತಿದೆ ನಾಸಿಕ್‌ನ ಟಿಸಿಎಸ್ ಕಂಪನಿಯ ಕರ್ಮಕಾಂಡ
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಒಟ್ಟು 37 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಬಾಂಬೆ ಹೈಕೋರ್ಟ್ ಬುಧವಾರ ಪ್ರಕರಣದ ಉಳಿದ ನಾಲ್ವರು ಆರೋಪಿಗಳನ್ನು ಖುಲಾಸೆಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ಚಂದ್ರಶೇಖರ್ ಮತ್ತು ನ್ಯಾಯಮೂರ್ತಿ ಶ್ಯಾಮ್ ಚಂದಕ್ ಅವರ ಪೀಠವು ಆರೋಪಿಗಳು ಸಲ್ಲಿಸಿದ ಮೇಲ್ಮನವಿಗಳನ್ನು ಪರಿಶೀಲಿಸಿ ಖುಲಾಸೆಗೊಳಿಸಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ ಆರಂಭಿಸಿರುವ ವಿಚಾರಣೆಯು ಈ ಮೂಲಕ ಕೊನೆಗೊಂಡಿದ್ದು, ಈ ಕುರಿತ ವಿವರವಾದ ಆದೇಶಕ್ಕಾಗಿ ಕಾಯಲಾಗುತ್ತಿದೆ.
ಏನಾಗಿತ್ತು?
2006ರ ಸೆಪ್ಟೆಂಬರ್ 8ರಂದು ನಾಸಿಕ್ ಜಿಲ್ಲೆಯ ಮಾಲೆಗಾಂವ್‌ನಲ್ಲಿರುವ ಮುಸ್ಲಿಂ ಸ್ಮಶಾನದಲ್ಲಿ ಶಬ್-ಎ-ಬರಾತ್ ಅಂದರೆ ಶಾಬಾನ್ ತಿಂಗಳ 15 ನೇ ರಾತ್ರಿ ಎಂಟನೇ ತಿಂಗಳಿನಲ್ಲಿ ಆಚರಿಸಲಾಗುವ ಇಸ್ಲಾಂನ ಪವಿತ್ರ ರಾತ್ರಿಯ ದಿನ ಮುಸ್ಲಿಮರು ಕ್ಷಮೆಗಾಗಿ ಪ್ರಾರ್ಥಿಸುತ್ತಿದ್ದರು. ಕುರಾನ್ ಪಠಿಸುತ್ತಾರೆ ಮತ್ತು ಮುಂಬರುವ ವರ್ಷಕ್ಕೆ ಆಶೀರ್ವಾದ ಪಡೆಯುತ್ತಿದ್ದರು. ಈ ಸಂದರ್ಭದಲ್ಲಿ ಸ್ಫೋಟ ಉಂಟಾಗಿತ್ತು.
ಬಳಿಕ ಪ್ರಕರಣಕ್ಕೆ ಸಂಬಂಧಿಸಿ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳವು ಒಂಬತ್ತು ಮುಸ್ಲಿಂ ವ್ಯಕ್ತಿಗಳನ್ನು ಬಂಧಿಸಿತ್ತು. ಬಳಿಕ ಅವರಿಗೆ ವಿಶೇಷ ಎಂಸಿಒಸಿಎ ನ್ಯಾಯಾಲಯವು 2012ರಲ್ಲಿ ಅವರಿಗೆ ಜಾಮೀನು ನೀಡಿತು. ಆರಂಭದಲ್ಲಿ ಎಟಿಎಸ್ ತನಿಖೆ ನಡೆಸುತ್ತಿದ್ದ ಪ್ರಕರಣವನ್ನು 2007ರಲ್ಲಿ ಸಿಬಿಐಗೆ ಹಸ್ತಾಂತರಿಸಲಾಯಿತು. ಬಳಿಕ ಪ್ರತ್ಯೇಕ ಸಂಚಿನಲ್ಲಿ ನಾಲ್ವರ ವಿರುದ್ಧ ಭಯೋತ್ಪಾದನಾ ನಿಗ್ರಹ ದಳವು ಆರೋಪ ಪಟ್ಟಿಯನ್ನು ಸಲ್ಲಿಸಿದ್ದು, ಈ ನಾಲ್ವರಿಗೆ ಹೈಕೋರ್ಟ್ ಜಾಮೀನು ನೀಡಿತು.
ಪ್ರಕರಣಕ್ಕೆ ಸಂಬಂಧಿಸಿ ಪುರಾವೆಗಳ ಕೊರತೆಯಿದ್ದು, ಯಾವುದೇ ಪ್ರತ್ಯಕ್ಷದರ್ಶಿಗಳು ಇಲ್ಲ. ಯಾವುದೇ ವಿಧಿವಿಜ್ಞಾನ ದೃಢೀಕರಣವೂ ಇಲ್ಲ ಎಂಬುದಾಗಿ ಪ್ರತಿವಾದಿ ವಕೀಲರು ನ್ಯಾಯಾಲಯದ ಗಮನ ಸೆಳೆದರು. ಪ್ರಕರಣದಲ್ಲಿ ಯಾವುದೇ ಪ್ರತ್ಯಕ್ಷದರ್ಶಿಗಳು ಇಲ್ಲ ಎಂಬುದಾಗಿ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಯೊಬ್ಬರು ಕೂಡ ನ್ಯಾಯಾಲಯದ ಮುಂದೆ ಹೇಳಿದರು.
Physical Abuse: ಕೊಡಗಿನ ಹೋಮ್‌ಸ್ಟೇಯಲ್ಲಿ ವಿದೇಶಿ ಮಹಿಳೆ ಮೇಲೆ ಅತ್ಯಾಚಾರ, ಇಬ್ಬರ ಬಂಧನ
ನ್ಯಾಯಕ್ಕಾಗಿ ಕಾಯುತ್ತಿರುವ ಸಂತ್ರಸ್ತ ಕುಟುಂಬಗಳು
ದೀರ್ಘಕಾಲದ ವಿಚಾರಣೆಯ ಬಳಿಕವೂ ಅಪರಾಧಿಗಳ ಪತ್ತೆಯಾಗಿಲ್ಲ. ಮಹಾರಾಷ್ಟ್ರದ ಅತ್ಯಂತ ಮಾರಕ ಭಯೋತ್ಪಾದಕ ದಾಳಿಗಳಲ್ಲಿ ಒಂದಾಗಿರುವ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಯಾರನ್ನೂ ಹೊಣೆಗಾರರನ್ನಾಗಿ ಮಾಡಲಾಗಿಲ್ಲ.