ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ನೀಟ್‌ ಮರು ಪರೀಕ್ಷೆಗೆ ಕೆಲವೇ ದಿನ ಬಾಕಿ ಇರುವಾಗಲೇ ವಿದ್ಯಾರ್ಥಿ ಆತ್ಮಹತ್ಯೆ!

ರಾಜಸ್ಥಾನದ ಸಿಕಾರ್ ಜಿಲ್ಲೆಯ ತನ್ನ ವಸತಿ ಫ್ಲಾಟ್‌ನಲ್ಲಿ 22 ವರ್ಷದ ನೀಟ್ ಆಕಾಂಕ್ಷಿಯೊಬ್ಬ ಶವವಾಗಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಜೂನ್ 21 ರಂದು ನಡೆಯಲಿರುವ ನೀಟ್-ಯುಜಿ ಮರು ಪರೀಕ್ಷೆಗೆ ಕೇವಲ ಒಂದು ವಾರ ಮೊದಲು ಉಮೇಶ್ ಮಾಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನೀಟ್‌ ಮರು ಪರೀಕ್ಷೆಗೆ ಕೆಲವೇ ದಿನ ಇರುವಾಗಲೇ ವಿದ್ಯಾರ್ಥಿ ಆತ್ಮಹತ್ಯೆ!

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Jun 16, 2026 10:28 AM

ಜೈಪುರ: ರಾಜಸ್ಥಾನದ ಸಿಕಾರ್ ಜಿಲ್ಲೆಯ ತನ್ನ ವಸತಿ ಫ್ಲಾಟ್‌ನಲ್ಲಿ 22 ವರ್ಷದ ನೀಟ್ (NEET) ಆಕಾಂಕ್ಷಿಯೊಬ್ಬ ಶವವಾಗಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. (Self Harming) ಜೂನ್ 21 ರಂದು ನಡೆಯಲಿರುವ ನೀಟ್-ಯುಜಿ ಮರು ಪರೀಕ್ಷೆಗೆ ಕೇವಲ ಒಂದು ವಾರ ಮೊದಲು ಉಮೇಶ್ ಮಾಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜುನ್ಜುನು ಜಿಲ್ಲೆಯ ನವಲ್ಗಢ ಪ್ರದೇಶದ ಕರಿ ಗ್ರಾಮದ ನಿವಾಸಿ ಉಮೇಶ್, ವೈದ್ಯಕೀಯ ಪ್ರವೇಶ ಪರೀಕ್ಷೆಗೆ ತಯಾರಿ ನಡೆಸುವಾಗ ಪಿಪ್ರಾಲಿ ರಸ್ತೆಯಲ್ಲಿರುವ ಮನೆಯಲ್ಲಿರುವ ತನ್ನ ತಾಯಿ, ಅಕ್ಕ ಮತ್ತು ತಮ್ಮನೊಂದಿಗೆ ವಾಸಿಸುತ್ತಿದ್ದ.

ಕುಟುಂಬ ಸದಸ್ಯರು ಅವರು ತಮ್ಮ ಕೋಣೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಇರುವುದನ್ನು ಕಂಡು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳದಿಂದ ಆತ್ಮಹತ್ಯೆ ಪತ್ರವೊಂದು ಪತ್ತೆಯಾಗಿದೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಶ್ರೀ ಕಲ್ಯಾಣ್ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ದು ನಂತರ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ ಎಂದು ಉದ್ಯೋಗ್ ನಗರ ಪೊಲೀಸ್ ಠಾಣೆಯ ಉಸ್ತುವಾರಿ ರಾಜೇಶ್ ಬುಡಾನಿಯಾ ತಿಳಿಸಿದ್ದಾರೆ. ಸಾವಿನ ಹಿಂದಿನ ನಿಖರವಾದ ಕಾರಣವನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ. . ಇದು ಅವರ ಮೂರನೇ ಪ್ರಯತ್ನ ಎಂದು ತಿಳಿದುಬಂದಿದೆ. ಹಿಂದಿನ ಎರಡು ಬಾರಿ ಪರೀಕ್ಷೆ ಪಾಸಾಗದಿದ್ದರೂ, ಈ ಬಾರಿ ಉತ್ತಮ ಫಲಿತಾಂಶದ ಆಶಯದಿಂದ ಬಲವಾಗಿ ತಯಾರಿ ನಡೆಸುತ್ತಿದ್ದರೆಂದು ಕುಟುಂಬದವರು ಹೇಳಿಕೊಂಡಿದ್ದಾರೆ.

ಕುಟುಂಬದವರು ನೀಡಿರುವ ಮಾಹಿತಿ ಪ್ರಕಾರ, ಉಮೇಶ್ ತಮ್ಮ ತಾಯಿಯನ್ನು ತಮ್ಮ ಊರಿಗೆ ಬಿಟ್ಟು ಮತ್ತೆ ಸಿಕಾರ್‌ಗೆ ಹಿಂದಿರುಗಿದ್ದರು. ನಂತರ ಅವರ ಅಕ್ಕ ಮತ್ತು ತಮ್ಮ ಫ್ಲಾಟ್‌ಗೆ ಬಂದಾಗ, ಉಮೇಶ್ ತಮ್ಮ ಕೋಣೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪ್ರಜ್ಞಾಹೀನವಾಗಿ ಬಿದ್ದಿರುವುದನ್ನು ಕಂಡಿದ್ದಾರೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಉಮೇಶ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ.

ಜೂನ್ 21 ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಕೆಲವು ದಿನಗಳ ಮೊದಲು ಈ ಘಟನೆ ನಡೆದಿದೆ. ಕಳೆದ ಒಂದು ತಿಂಗಳಲ್ಲಿ ಸಿಕಾರ್‌ನಲ್ಲಿ ನೀಟ್ ಆಕಾಂಕ್ಷಿಯೊಬ್ಬರು ನಡೆಸಿದ ಎರಡನೇ ಪ್ರಕರಣ ಇದಾಗಿದೆ. ಇದಕ್ಕೂ ಮೊದಲು, ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮತ್ತೊಬ್ಬ ವಿದ್ಯಾರ್ಥಿ ನಗರದಲ್ಲಿ ಶವವಾಗಿ ಪತ್ತೆಯಾಗಿದ್ದ.

22ನೇ ವಯಸ್ಸಿಗೆ ಜೀವ ಕಳೆದುಕೊಂಡ ʻಕುಂಕುಮ್‌ ಭಾಗ್ಯʼ ಸೀರಿಯಲ್‌ ನಟಿ ಸಂಚಿತಾ ಉಗಾಲೆ; ಆತ್ಮಹತ್ಯೆಗೂ ಮುನ್ನ ಶೇರ್‌ ಮಾಡಿದ ರೀಲ್ಸ್‌ನಲ್ಲಿ ಏನಿದೆ?

ಮೇ 3 ರಂದು ನಡೆಯಬೇಕಿದ್ದ ನೀಟ್-ಯುಜಿ 2026 ಪರೀಕ್ಷೆಯನ್ನು ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ರದ್ದುಗೊಳಿಸಿದ ಕೆಲವು ದಿನಗಳ ನಂತರ ಹಲವು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.