ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಬೆಂಗಳೂರಿನ ಜ್ಯುವೆಲರಿ ಶಾಪ್‌ನಲ್ಲಿ ಪ್ಲಾಸ್ಟಿಕ್‌ ಗನ್‌ ತೋರಿಸಿ ನಗದು, ಚಿನ್ನಾಭರಣ ದರೋಡೆ!

Jewellery shop robbery in Bengaluru: ಬೆಂಗಳೂರಿನ ದಾಸನಪುರದ ರಾಮ್ ದೇವ್ ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ನಡೆದಿದೆ. ಬೈಕ್​ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಸ್ಥಳ ಪರಿಶೀಲನೆ ನಡೆಸಿ, ಕೇಸ್‌ ದಾಖಲಿಸಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಪ್ಲಾಸ್ಟಿಕ್‌ ಗನ್‌ ತೋರಿಸಿ ನಗದು, ಚಿನ್ನಾಭರಣ ದರೋಡೆ!

ಬೆಂಗಳೂರಿನ ದಾಸನಪುರದ ಜ್ಯುವೆಲ್ಲರಿ ಶಾಪ್‌ನಲ್ಲಿ ದರೋಡೆ. -

Prabhakara R
Prabhakara R Jan 27, 2026 10:29 PM

ಬೆಂಗಳೂರು: ವಿಜಯಪುರದ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನ ಚಿನ್ನದಂಗಡಿಗೆ ದರೋಡೆಕೋರರು ನುಗ್ಗಿ, 27 ಗ್ರಾಂ ಚಿನ್ನದ ಸರ, 50 ಸಾವಿರ ನಗದು ದೋಚಿ ಪರಾರಿಯಾಗಿರುವ ಘಟನೆ (jewellery shop robbery) ನಡೆದಿದೆ. ಚಿನ್ನದ ಅಂಗಡಿಯಲ್ಲಿ ಖದೀಮರು ಪ್ಲಾಸ್ಟಿಕ್​​​ ಗನ್ ತೋರಿಸಿ ಚಿನ್ನಾಭರಣ, ನಗದು ಲೂಟಿ ಮಾಡಿದ್ದಾರೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್​ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ. ಬೆಂಗಳೂರಿನ ದಾಸನಪುರದ ರಾಮ್ ದೇವ್ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ಇಬ್ಬರು ಕಳ್ಳರು, ಅಂಗಡಿ ಮಾಲೀಕನಿಗೆ ಪ್ಲಾಸ್ಟಿಕ್​​ ಗನ್​ ತೋರಿಸಿ ದರೋಡೆ ಮಾಡಿದ್ದಾರೆ. 27 ಗ್ರಾಂ ಚಿನ್ನದ ಸರ, ಐವತ್ತು ಸಾವಿರ ನಗದು ದೋಚಿದ್ದು, ಈ ವೇಳೆ ಜ್ಯುವೆಲ್ಲರಿ ಶಾಪ್ ಮಾಲೀಕ ಪ್ರತಿರೋಧ ತೋರುತ್ತಿದ್ದಂತೆ ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ.



ಘಟನೆ ಬಗ್ಗೆ ಮಾಹಿತಿ ಪಡೆದ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಸ್ಥಳ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗಾಗಿ ಹುಡುಕಾಟ ಆರಂಭಿಸಿದ್ದಾರೆ.

ವಿಜಯಪುರದಲ್ಲೂ ನಡೆದಿತ್ತು ಚಿನ್ನದಂಗಡಿ ದರೋಡೆ

ವಿಜಯಪುರ: ಹಾಡಹಗಲೇ ಪಿಸ್ತೂಲ್ ತೋರಿಸಿ 205 ಗ್ರಾಂ ಚಿನ್ನಾಭರಣ, 1 ಕೆ.ಜಿ ಬೆಳ್ಳಿ ದರೋಡೆ ಮಾಡಿದ್ದ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಗ್ರಾಮದಲ್ಲಿ ನಡೆದಿತ್ತು. ಮಹಾರುದ್ರ ಕಂಚಗಾರ್ ಎಂಬುವವರ ಚಿನ್ನದಂಗಡಿಯಲ್ಲಿ ದರೋಡೆಯಾಗಿತ್ತು. ಖದೀಮರು ಅಂಗಡಿಗೆ ನುಗ್ಗಿ ಚಿನ್ನ, ಬೆಳ್ಳಿ ದೋಚಿಕೊಂಡು ಹೋದ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಅಂಗಡಿಗೆ ನುಗ್ಗಿದ ಇಬ್ಬರು ಮುಸುಕುಧಾರಿಗಳು ಮೊದಲು ಸ್ಥಳೀಯರನ್ನು ಹೆದರಿಸಿದ್ದರು. ನಂತರ ಮಾಲೀಕನಿಗೆ ಪಿಸ್ತೂಲ್ ತೋರಿಸಿ ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿದ್ದರು. ಅಂಗಡಿಯಲ್ಲಿದ್ದ ಚಿನ್ನಾಭರಣ ಹಾಗೂ ಬೆಳ್ಳಿಯನ್ನು ದೋಚಿದ್ದರು. ಈ ವೇಳೆ ದರೋಡೆಯ ದೃಶ್ಯ ಮೊಬೈಲ್‌ನಲ್ಲಿ ಸೆರೆಹಿಡಿಯುತ್ತಿದ್ದ ವ್ಯಕ್ತಿಗೆ ಗುಂಡು ಹಾರಿಸಿದ್ದು, ಅದು ತಪ್ಪಾಗಿ ಪಕ್ಕದಲ್ಲಿದ್ದ ಆತ್ಮಲಿಂಗ ಹೂಗಾರ ಎಂಬ ವ್ಯಕ್ತಿಗೆ ತಗುಲಿತ್ತು. ಸದ್ಯ ಗಾಯಾಳುವನ್ನು ವಿಜಯಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Haveri Accident: ಹಾವೇರಿ ಬಳಿ ಬಸ್-ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿಯಾಗಿ 15 ಜನಕ್ಕೆ ತೀವ್ರ ಗಾಯ

ಪ್ರಾಥಮಿಕ ತನಿಖೆ ಪ್ರಕಾರ, 205 ಗ್ರಾಂ ಚಿನ್ನಾಭರಣ, 1 ಕೆ.ಜಿ ಬೆಳ್ಳಿ ದರೋಡೆ ಮಾಡಿದ್ದಾರೆ ಎನ್ನಲಾಗಿದೆ. ಸಿಸಿಟಿವಿ ಕ್ಯಾಮರಾದಲ್ಲಿ ಸಿಕ್ಕಿರೋ ದೃಶ್ಯಗಳನ್ನ ಆಧಾರವಾಗಿಟ್ಟುಕೊಂಡು ಪೊಲೀಸರು ದರೋಡೆಕೋರರ ಬೆನ್ನಟ್ಟಿದ್ದಾರೆ.