ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ರಾಜಧಾನಿಯನ್ನೇ ಬೆಚ್ಚಿ ಬೀಳಿಸಿದ ಡ್ರಗ್ಸ್‌ ದಂಧೆ; 3 ಫ್ಯಾಕ್ಟರಿ ಸೀಜ್‌, 55 ಕೋಟಿ ಮೌಲ್ಯದ ಡ್ರಗ್‌ ಪತ್ತೆ

ಹೊಸ ವರ್ಷಕ್ಕೆ ಬೆಂಗಳೂರು ಸಜ್ಜಾಗುತ್ತಿದ್ದ ವೇಳೆಯಲ್ಲೇ ಭಾರೀ ಡ್ರಗ್ಸ್‌ ಜಾಲವನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಮಹಾರಾಷ್ಟ್ರದ ANTF ಕೊಂಕಣ ವಿಭಾಗದ ಪೊಲೀಸರು ಬೆಂಗಳೂರಿನ ವಿಧೆಡೆ ದಾಳಿ ನಡೆಸಿ 55.88 ಕೋಟಿ ರೂ. ಮೌಲ್ಯದ ಡ್ರಗ್ಸ್​ ಸೀಜ್ ಮಾಡಲಾಗಿದೆ.

ಬೆಂಗಳೂರಿನಲ್ಲಿ ಡ್ರಗ್ಸ್‌ ಜಾಲ ಪತ್ತೆ

ಬೆಂಗಳೂರು: ಹೊಸ ವರ್ಷಕ್ಕೆ ಬೆಂಗಳೂರು (Bengaluru) ಸಜ್ಜಾಗುತ್ತಿದ್ದ ವೇಳೆಯಲ್ಲೇ ಭಾರೀ ಡ್ರಗ್ಸ್‌ ಜಾಲವನ್ನು (Drugs Case) ಪೊಲೀಸರು ಬಯಲಿಗೆಳೆದಿದ್ದಾರೆ. ಮಹಾರಾಷ್ಟ್ರದ ANTF ಕೊಂಕಣ ವಿಭಾಗದ ಪೊಲೀಸರು ಬೆಂಗಳೂರಿನ ವಿಧೆಡೆ ದಾಳಿ ನಡೆಸಿ 55.88 ಕೋಟಿ ರೂ. ಮೌಲ್ಯದ ಡ್ರಗ್ಸ್​ ಸೀಜ್ ಮಾಡಿದ್ದು, ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ. RJ ಇವೆಂಟ್ ಹೆಸರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿರುವುದು ಪತ್ತೆಯಾಗಿದೆ.

ಮಹಾರಾಷ್ಟ್ರದ ರಾಷ್ಟ್ರ ಮಾದಕ ದ್ರವ್ಯ ನಿಗ್ರಹ ದಳ (NDPS) ಮುಂಬೈನಲ್ಲಿ ದಾಳಿ ನಡೆಸಿ, ಒಂದೂವರೆ ಕೋಟಿ ರೂಪಾಯಿ ಮೌಲ್ಯದ ಡ್ರಗ್‌ಗಳನ್ನು ವಶಪಡಿಸಿಕೊಂಡಿತ್ತು. ಈ ವೇಳೆ ಅಬ್ದುಲ್ ಖಾದಿರ್ ಶೇಖ್ ಎಂಬಾತನನ್ನು ಬಂಧಿಸಲಾಗಿತ್ತು. ವಿಚಾರಣೆ ವೇಳೆ ಆತ ನೀಡಿದ ಮಾಹಿತಿಯಿಂದ ಬೆಂಗಳೂರಿನಲ್ಲಿ ನಡೆಸುತ್ತಿದ್ದ ಡ್ರಗ್ಸ್‌ ಜಾಲ ಬೆಳಕಿಗೆ ಬಂದಿದೆ. ದಾಳಿ ವೇಳೆ 4.1 ಕೆಜಿ ಘನ MDMA ಮತ್ತು 17 ಕೆಜಿ ದ್ರವ MDMA ಸೇರಿ 55.88 ಕೋಟಿ ರೂ. ಮೌಲ್ಯದ ಒಟ್ಟು 21.4 ಕೆಜಿ‌ ಡ್ರಗ್ಸ್​​ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜಸ್ಥಾನ ಮೂಲದ ಸೂರಜ್ ರಮೇಶ್ ಯಾದವ್, ಮಲ್ಖಾನ್ ರಾಮಲಾಲ್ ಬಿಷ್ಣೋಯ್ ಸೇರಿದಂತೆ ನಾಲ್ವರ ಬಂಧಿಸಲಾಗಿದೆ. ಈ ಫ್ಯಾಕ್ಟರಿಗಳಿಂದ ದೇಶದ ಅನೇಕ ರಾಜ್ಯಗಳಿಗೆ ಡ್ರಗ್ಸ್ ಸಪ್ಲೈ ಶಂಕೆ ವ್ಯಕ್ತವಾಗಿದ್ದು, ಮಹಾರಾಷ್ಟ್ರ ಪೊಲೀಸರು ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಆರೋಪಿಗಳು ಬೆಂಗಳೂರಿನಲ್ಲಿ ಡ್ರಗ್ ತಯಾರಿಸಿ, ಮಹಾರಾಷ್ಟ್ರ ಸೇರಿದಂತೆ ಬೇರೆ ರಾಜ್ಯಗಳಿಗೆ ಸರಬರಾಜು ಮಾಡುತ್ತಿದ್ದರೆಂಬುದು ತನಿಖೆಯಿಂದ ತಿಳಿದುಬಂದಿದೆ. ವಿಶೇಷವಾಗಿ ಹೊಸ ವರ್ಷಾಚರಣೆ, ಪಾರ್ಟಿ ಸಂಸ್ಕೃತಿ ಹೆಚ್ಚಿರುವ ಸಮಯವನ್ನು ಟಾರ್ಗೆಟ್ ಮಾಡಿಕೊಂಡು ಡ್ರಗ್ ವಿತರಣೆ ಮಾಡುವ ಯೋಜನೆ ರೂಪಿಸಲಾಗಿತ್ತು ಎನ್ನಲಾಗಿದೆ. ಸದ್ಯ ಮಹಾರಾಷ್ಟ್ರ ಪೊಲೀಸರ ಮಾಹಿತಿ ಆಧರಿಸಿ ಬೆಂಗಳೂರು ಪೊಲೀಸರು ಕೂಡ ಸಮಾಂತರವಾಗಿ ತನಿಖೆ ನಡೆಸುತ್ತಿದ್ದಾರೆ. ಈ ಜಾಲಕ್ಕೆ ಇನ್ನೂ ಹೆಚ್ಚಿನ ವ್ಯಕ್ತಿಗಳು, ಹಣಕಾಸು ಮೂಲಗಳು ಮತ್ತು ರಾಜ್ಯಾಂತರ ಸಂಪರ್ಕಗಳಿರುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೇಶವನ್ನೇ ಬೆಚ್ಚಿ ಬೀಳಿಸೋ ಘಟನೆ... ಬಾಲಕಿಗೆ ಡ್ರಗ್ಸ್‌ ನೀಡಿ ಕಾರಿನಲ್ಲೇ ಗ್ಯಾಂಗ್‌ರೇಪ್‌

ಬಾಗಲೂರು ಪೊಲೀಸ್ ಠಾಣೆ ಮಿತಿಯೊಳಗಿನ ಸ್ಪಂದನ ಲೇಔಟ್ ಕಾಲೋನಿ, ಕೊತ್ತನೂರು ಪೊಲೀಸ್ ಠಾಣೆ ಮಿತಿಯೊಳಗಿನ ಎನ್.ಜಿ. ಗೋಲ್ಲಹಳ್ಳಿ ಪ್ರದೇಶದಲ್ಲಿ ಆರ್.ಜೆ. ಈವೆಂಟ್ ಎಂಬ ಹೆಸರಿನ ಕಾರ್ಖಾನೆ, ಅವಲಹಳ್ಳಿ ಪೊಲೀಸ್ ಠಾಣೆ ಮಿತಿಯೊಳಗಿನ ಯರಪ್ಪನಹಳ್ಳಿ ಮನೆಯಲ್ಲಿ ಈ ಡ್ರಗ್ಸ್‌ ಜಾಲವನ್ನು ನಡೆಸುತ್ತಿದ್ದರು.