ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಸೇವಾ ಸಂಕಲ್ಪ ಅಭಿಯಾನ ವೇಳೆ ಕಳ್ಳರ ಕೈಚಳಕ: ಬಿಜೆಪಿ ಕಾರ್ಯಕರ್ತನ ಜೇಬಿನಿಂದ 60 ಸಾವಿರ ರೂ. ಕಳವು

Tumkur News: ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಚೇಳೂರು ಗ್ರಾಮದಲ್ಲಿ ಬಿಜೆಪಿ ಆಯೋಜಿಸಿದ್ದ 'ಸೇವಾ ಸಂಕಲ್ಪ ಅಭಿಯಾನ'ದ ವೇಳೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಬಿಜೆಪಿ ಕಾರ್ಯಕರ್ತರೊಬ್ಬರ ಪ್ಯಾಂಟ್ ಜೇಬನ್ನು ಕತ್ತರಿಸಿ 60 ಸಾವಿರ ರೂಪಾಯಿ ಹಣವನ್ನು ಕಳ್ಳರು ದೋಚಿರುವ ಘಟನೆ ನಡೆದಿದೆ.

ಹಣ ಕಳೆದುಕೊಂಡ ಬಿಜೆಪಿ ಕಾರ್ಯಕರ್ತ ತುಮಕೂರಿನ ಮಹಾದೇವ್.

ತುಮಕೂರು, ಅ.05: ಜಿಲ್ಲೆಯ ಗುಬ್ಬಿ ತಾಲೂಕಿನ ಚೇಳೂರು ಗ್ರಾಮದಲ್ಲಿ (Tumkur News) ಬಿಜೆಪಿ ಆಯೋಜಿಸಿದ್ದ 'ಸೇವಾ ಸಂಕಲ್ಪ ಅಭಿಯಾನ'ದ ವೇಳೆ ಪಿಕ್‌ಪಾಕೆಟ್ ಕಳ್ಳರು ತಮ್ಮ ಕೈಚಳಕ ತೋರಿದ್ದಾರೆ. ಕಾರ್ಯಕ್ರಮಕ್ಕೆ ಆಗಮಿಸಿದ್ದ ಬಿಜೆಪಿ ಕಾರ್ಯಕರ್ತರೊಬ್ಬರ ಪ್ಯಾಂಟ್ ಜೇಬನ್ನು ಕತ್ತರಿಸಿ 60 ಸಾವಿರ ರೂಪಾಯಿ ಹಣವನ್ನು ಕಳ್ಳರು ಎಗರಿಸಿರುವ ಘಟನೆ ನಡೆದಿದೆ.

ತುಮಕೂರಿನ ಮಹಾದೇವ್ ಎಂಬುವವರೇ ಹಣ ಕಳೆದುಕೊಂಡವರು ಎಂದು ತಿಳಿದುಬಂದಿದೆ. ಶಾಸಕ ಜ್ಯೋತಿ ಗಣೇಶ್ ಅವರೊಂದಿಗೆ ಮಹಾದೇವ್ ಅವರು ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಘಟನೆಯ ವಿವರ

ಸೇವಾ ಸಂಕಲ್ಪ ಅಭಿಯಾನ ನಡೆಯುತ್ತಿದ್ದ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರಿಂದ ತೀವ್ರ ನೂಕುನುಗ್ಗಲು ಉಂಟಾಗಿತ್ತು. ಜನಸಂದಣಿಯ ಲಾಭ ಪಡೆದ ಕಳ್ಳರು, ಮಹಾದೇವ್ ಅವರ ಬಳಿ ಬಂದು ಅವರ ಪ್ಯಾಂಟ್ ಜೇಬನ್ನು ಕತ್ತರಿಸಿದ್ದಾರೆ. ಜೇಬಿನಲ್ಲಿದ್ದ 60 ಸಾವಿರ ರುಪಾಯಿ ನಗದನ್ನು ದೋಚಿಕೊಂಡು ಕಳ್ಳರು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಕಾರ್ಯಕ್ರಮದ ವೇಳೆ ಹಣ ಕಳವಾಗಿರುವುದು ಗಮನಕ್ಕೆ ಬಂದ ಬಳಿಕ ಮಹಾದೇವ್ ಅವರು ಆತಂಕಕ್ಕೀಡಾಗಿದ್ದಾರೆ. ಜನಸಂದಣಿಯನ್ನೇ ಅಸ್ತ್ರವಾಗಿ ಬಳಸಿಕೊಂಡು ಕಳ್ಳರು ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.

ತುಮಕೂರಿನ ಲಕ್ಕೇನಹಳ್ಳಿಯಲ್ಲಿ ಅಪರೂಪದ 'ಚಿಪ್ಪು ಹಂದಿ' ರಕ್ಷಣೆ

ಈ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯವಾಗಿ ತೀವ್ರ ಚರ್ಚೆ ನಡೆಯುತ್ತಿದ್ದು, ಕಳ್ಳರ ಪತ್ತೆಗೆ ಪೊಲೀಸರು ಶೀಘ್ರವೇ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ. ಕಾರ್ಯಕ್ರಮದ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಿದರೆ ಕಳ್ಳರ ಸುಳಿವು ಸಿಗುವ ನಿರೀಕ್ಷೆಯಿದೆ.