ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಖಾಸಗಿ ಬಸ್‌ಗೆ ಬೆಂಕಿ: 7 ಸಾವು, 22 ಜನರಿಗೆ ಗಾಯ

ರಾಜಸ್ಥಾನದ ದೌಸಾ ಜಿಲ್ಲೆಯ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪ್ರಯಾಣಿಕರ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಕನಿಷ್ಠ 22 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಸಂಗ್ರಹ ಚಿತ್ರ

ಜೈಪುರ: ರಾಜಸ್ಥಾನದ ದೌಸಾ ಜಿಲ್ಲೆಯ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ( Delhi-Mumbai Expressway) ಬುಧವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪ್ರಯಾಣಿಕರ ಬಸ್‌ಗೆ ಬೆಂಕಿ (Fire Accident) ಹೊತ್ತಿಕೊಂಡ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಕನಿಷ್ಠ 22 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸುಮಾರು 37 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಹರಿದ್ವಾರದಿಂದ ಇಂದೋರ್‌ಗೆ ಪ್ರಯಾಣಿಸುತ್ತಿದ್ದಾಗ ಬೆಳಗಿನ ಜಾವ 2:30 ರ ಸುಮಾರಿಗೆ ಬೆಂಕಿ ಹೊತ್ತಿಕೊಂಡಿತು. ಬೆಂಕಿಗೆ ನಿಖರವಾದ ಕಾರಣ ಇನ್ನೂ ಅಧಿಕೃತವಾಗಿ ದೃಢಪಟ್ಟಿಲ್ಲ.

ಅಪಘಾತದಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ, ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಘಟನೆ ನಡೆದ ಕೂಡಲೇ ಪೊಲೀಸರು, ಅಗ್ನಿಶಾಮಕ ದಳ ಮತ್ತು ತುರ್ತು ಪ್ರತಿಕ್ರಿಯೆ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದವು. ಕಾರ್ಯಾಚರಣೆಯ ಮೇಲ್ವಿಚಾರಣೆಗಾಗಿ ದೌಸಾ ಪೊಲೀಸ್ ವರಿಷ್ಠಾಧಿಕಾರಿ ಪಿಯೂಷ್ ದೀಕ್ಷಿತ್ ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಕಳೆದ ಕೆಲ ದಿನಗಳ ಹಿಂದೆ ಶಿವಮೊಗ್ಗ- ಉಡುಪಿ ಗಡಿಯ ಹುಲಿಕಲ್ (ಬಾಳೆಬರೇ) ಘಾಟಿಯಲ್ಲಿ ಖಾಸಗಿ ಬಸ್‌ಗೆ ಬೆಂಕಿ ಬಿದ್ದು, ಸಂಪೂರ್ಣ ಸುಟ್ಟು ಕರಕಲಾಗಿತ್ತು. ಆದೃಷ್ಟವಶಾತ್, ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಅಪಾಯದಿಂದ ಪಾರಾಗಿದ್ದರು. ಶ್ರೀ ದುರ್ಗಾಂಬಾ ಎಂಬ ಖಾಸಗಿ ಬಸ್ ಘಾಟಿಯಿಂದ ಕುಂದಾಪುರ ಕಡೆಗೆ ಪ್ರಯಾಣಿಸುತ್ತಿತ್ತು. ಈ ವೇಳೆ ಬೆಂಕಿ ಹೊತ್ತಿಕೊಂಡಿರುವುದು ಗೊತ್ತಾಗುತ್ತಿದ್ದಂತೆ ಬಸ್ಸಿನಲ್ಲಿದ್ದವರೆಲ್ಲರೂ ತಕ್ಷಣವೇ ಹೊರಗಡೆ ಬಂದಿದ್ದಾರೆ.

ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತಯೇ ಸ್ಥಳಕ್ಕೆ ಹೊಸನಗರ ಅಗ್ನಿ ಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಬಸ್​ನಲ್ಲಿನ ತಾಂತ್ರಿಕ ಸಮಸ್ಯೆಯಿಂದ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗಿದೆ. ಘಟನೆಯ ಕುರಿತು ನಗರ ಪೊಲೀಸ್ ಠಾಣೆಯ ಸಿಬ್ಬಂದಿ ತನಿಖೆ ನಡೆಸುತ್ತಿದ್ದಾರೆ. ಘಟನೆಯಿಂದ ಘಾಟಿಯಲ್ಲಿ ಕೆಲಕಾಲ ಸಂಚಾರಕ್ಕೆ ತಡೆ ಉಂಟಾಗಿತ್ತು.

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಬೆಂಕಿ ಅವಘಡ; ಆಪರೇಷನ್ ಥಿಯೇಟರ್​ನಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ

ಇತ್ತೀಚೆಗೆ ಹಾಸನದಲ್ಲೂ ಇಂತಹದ್ದೇ ಘಟನೆ ಸಂಭವಿಸಿತ್ತು. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್​ನ ಟೈರ್ ಸ್ಫೋಟಗೊಂಡು ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ಹಾಸನ ಜಿಲ್ಲೆಯ ಶಾಂತಿಗ್ರಾಮ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿತ್ತು. ಪ್ರಯಾಣಿಕರೊಬ್ಬರ ಸಮಯಪ್ರಜ್ಞೆಯಿಂದ ಬಸ್​ನಲ್ಲಿದ್ದ 36 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದರು. ಆದರೆ, ಲಗೇಜ್ ಹಾಗೂ ಮೊಬೈಲ್ ವಸ್ತುಗಳು ಬೆಂಕಿಗಾಹುತಿಯಾಗಿದ್ದವು. ಕೂದಲೆಳೆ ಅಂತರದಲ್ಲಿ ಎಲ್ಲರೂ ಪಾರಾಗಿದ್ದರು.

Vishakha Bhat Heggar

View all posts by this author