ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Telangana Accident: ತೆಲಂಗಾಣದಲ್ಲಿ ಭೀಕರ ಅಪಘಾತ; ಆಟೋಗೆ ಪೆಟ್ರೋಲ್‌ ಟ್ಯಾಂಕರ್‌ ಡಿಕ್ಕಿಯಾಗಿ ಬೀದರ್‌ ಮೂಲದ 7 ಕೃಷಿ ಕಾರ್ಮಿಕರ ದುರ್ಮರಣ

ಭೀಕರ ಅಪಘಾತಕ್ಕೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ಲಭ್ಯವಾಗುವಂತೆ ನೋಡಿಕೊಳ್ಳಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದಾಗಿ ತಿಳಿಸಿದ್ದಾರೆ.

ಹೈದರಾಬಾದ್: ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಜಹೀರಾಬಾದ್ ಮಂಡಲ್‌ನ ಸತ್ವಾರ್ ಎಂಬಲ್ಲಿ ಮಂಗಳವಾರ ಸಂಜೆ ಆಟೋಗೆ ಪೆಟ್ರೋಲ್‌ ಟ್ಯಾಂಕರ್ ಡಿಕ್ಕಿಯಾಗಿ ಬೀದರ್‌ ಮೂಲದ ಏಳು ಕೃಷಿ ಕಾರ್ಮಿಕರು (Telangana Accident) ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ಅಪಘಾತದಲ್ಲಿ ರೇಖಾ, ಕವಿತಾ, ರೇಷ್ಮಾ, ಆಟೋ ಚಾಲಕ ದೇವದಾಸ್ ಸೇರಿ 7 ಮಂದಿ ಮೃತಪಟ್ಟಿದ್ದಾರೆ. ಇನ್ನು ನಿರ್ಮಲಾ, ನಿಕಿತಾ, ತುಳಸಮ್ಮ, ಚಂದ್ರಕಲಾ, ರಾಧಿಕಾ, ಶಿಲ್ಪಾ ಮತ್ತು ಶೋಭಾ ಎಂಬವರು ಗಾಯಗೊಂಡಿದ್ದು, ಜಹೀರಾಬಾದ್‌ನ ಏರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಮೂವರ ಪರಿಸ್ಥಿತಿ ಗಂಭೀರವಾಗಿ ಎಂದು ವರದಿಗಳು ಸೂಚಿಸಿವೆ.

ಮೃತರು ಬೀದರ್‌ನ ರಾಜ್‌ಗಿರಿಯ ಕೃಷಿ ಕಾರ್ಮಿಕರು. ಕೃಷಿ ಕೆಲಸ ಮುಗಿಸಿಕೊಂಡು ವಾಪಸ್ ಬರುತ್ತಿರುವಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಆಟೋ ರಿಕ್ಷಾದಲ್ಲಿ ಚಾಲಕ ಸೇರಿ ಒಟ್ಟು 12 ಮಂದಿ ಪ್ರಯಾಣಿಸುತ್ತಿದ್ದರು. ಇವರಲ್ಲಿ 11 ಮಂದಿ ಮಹಿಳಾ ಕಾರ್ಮಿಕರು ಎಂಬ ಮಾಹಿತಿ ಲಭ್ಯವಾಗಿದೆ.

ಇವರೆಲ್ಲರೂ ಪ್ರತಿದಿನ ಕೂಲಿ ಕೆಲಸಕ್ಕಾಗಿ ಜಹೀರಾಬಾದ್‌ಗೆ ತೆರಳುತ್ತಿದ್ದರು. ಮುನಿಪಲ್ಲಿ ಮಂಡಲದ ಬುದೇರಾದಲ್ಲಿ ಹತ್ತಿ ಕಳೆಯ ತೆಗೆಯುವ ಕೆಲಸ ಮಾಡುತ್ತಿದ್ದರು ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರು ಘಟನೆಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ಲಭ್ಯವಾಗುವಂತೆ ನೋಡಿಕೊಳ್ಳಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದಾಗಿ ತಿಳಿಸಿದ್ದಾರೆ.