ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಬೀದಿ ನಾಯಿಗೆ ಮತ್ತೊಂದು ಬಲಿ; ಥಾಣೆಯಲ್ಲಿ ಬಾಲಕನನ್ನು ಕಚ್ಚಿ ಕೊಂದ ರಕ್ಕಸ ಶ್ವಾನ

ಬೀದಿ ನಾಯಿಯೊಂದು ದಾಳಿ ನಡೆಸಿ ಏಳು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ್‌ನಲ್ಲಿ ನಡೆದಿದೆ. ಬಾಲಕನನ್ನು ರಕ್ಷಿಸಲು ಹೋದ ಸ್ನೇಹಿತನ ಮೇಲೂ ನಾಯಿ ದಾಳಿ ನಡೆಸಿ ಗಾಯಗೊಳಿಸಿದೆ. ಮಕ್ಕಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಓರ್ವ ಬಾಲಕ ಸಾವನ್ನಪ್ಪಿದ್ದಾನೆ.

ಸಂಗ್ರಹ ಚಿತ್ರ

ಥಾಣೆ: ಮನೆಯ ಸಮೀಪವೇ ಆಟವಾಡುತ್ತಿದ್ದ ಬಾಲಕನ ಮೇಲೆ ನಾಯಿಯೊಂದು ದಾಳಿ (dog attack) ನಡೆಸಿ ಕೊಂದ ಘಟನೆ ಮಹಾರಾಷ್ಟ್ರದ (maharastra) ಥಾಣೆ ಜಿಲ್ಲೆಯ (Thane district) ಕಲ್ಯಾಣ್‌ನಲ್ಲಿ (Kalyan) ನಡೆದಿದೆ. ಈ ಸಂದರ್ಭದಲ್ಲಿ ಆತನನ್ನು ರಕ್ಷಿಸಲು ಬಂದ ಸ್ನೇಹಿತನ ಮೇಲೂ ನಾಯಿ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದೆ. ಇದು ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ನಾಯಿಗಳಿಂದ ಹೆಚ್ಚುತ್ತಿರುವ ಬೆದರಿಕೆಗೆ ತಕ್ಷಣ ಪರಿಹಾರ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಅಧಿಕಾರಿಗಳ ಬಳಿ ಆಗ್ರಹಿಸಿದ್ದಾರೆ.

ಕಲ್ಯಾಣ್‌ನಲ್ಲಿ ಗುರುವಾರ ಮಧ್ಯಾಹ್ನ ಮನೆ ಸಮೀಪವೇ ಆಡುತ್ತಿದ್ದ ಏಳು ವರ್ಷದ ಬಾಲಕ ಮೇಲೆ ಬೀದಿ ನಾಯಿಯೊಂದು ದಾಳಿ ನಡೆಸಿತ್ತು. ಈ ಸಂದರ್ಭದಲ್ಲಿ ಬಾಲಕನ ಕಿರುಚಾಟ ಕೇಳಿ ಓಡಿ ಬಂದು ರಕ್ಷಣೆಗೆ ಮುಂದಾದ ಇನ್ನೋರ್ವ ಬಾಲಕನ ಮೇಲೂ ನಾಯಿ ದಾಳಿ ನಡೆಸಿದೆ. ಈ ದಾಳಿಯಿಂದ ಏಳು ವರ್ಷದ ಬಾಲಕ ಸಾವನ್ನಪ್ಪಿದ್ದಾನೆ.

Body Found: ಬೆಂಗಳೂರಿನ ಮನೆಯೊಳಗೆ ವ್ಯಕ್ತಿಯ ಕೊಳೆತ ಶವ ಪತ್ತೆ; ಹತ್ಯೆ ಎಸಗಿ ಮನೆಗೆ ಲಾಕ್‌ ಮಾಡಿದ ದುಷ್ಟರು

ಖುಶಿಲ್ ಶಂಕರ್ ವಾಘೆ ತನ್ನ ಮನೆಯ ಬಳಿ ಆಟವಾಡುತ್ತಿದ್ದನು. ಈ ಸಂದರ್ಭದಲ್ಲಿ ಬೀದಿ ನಾಯಿಯೊಂದು ಹಠಾತ್ತನೆ ಆತನ ಮೇಲೆ ದಾಳಿ ಮಾಡಿದೆ. ಅವನ ಕಿರುಚಾಟ ಕೇಳಿ ಓಡಿ ಬಂದ ನೀಲೇಶ್ ಬಾಗ್ಲೆ ಮೇಲೂ ನಾಯಿ ದಾಳಿ ನಡೆಸಿತ್ತು. ತಕ್ಷಣವೇ ಸ್ಥಳೀಯರು ಸೇರಿ ನಾಯಿಯನ್ನು ಓಡಿಸಿ ಬಾಲಕರನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋದರು. ಚಿಕಿತ್ಸೆ ಪಡೆಯುತ್ತಿರುವಾಗ ಖುಶಿಲ್ ಸಾವನ್ನಪ್ಪಿದ್ದು, ನೀಲೇಶ್ ಗೆ ಚಿಕಿತ್ಸೆ ಥಾಣೆ ಆಸ್ಪತ್ರೆಯಲ್ಲಿ ಮುಂದುವರಿಸಲಾಗಿದೆ. ಆತನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಖುಶಿಲ್ ಶಂಕರ್ ವಾಘೆ ಪೋಷಕರು ನಗರದಲ್ಲಿ ಕಾರ್ಮಿಕರಾಗಿದ್ದಾರೆ. ಈ ಪ್ರದೇಶದಲ್ಲಿ ಬೀದಿ ನಾಯಿಗಳ ಸಂಖ್ಯೆ ವೇಗವಾಗಿ ಹೆಚ್ಚುತ್ತಿದ್ದು, ಆಗಾಗ್ಗೆ ಮಕ್ಕಳ ಮೇಲೆ ದಾಳಿಯನ್ನು ನಡೆಸುತ್ತಿದೆ. ಇದರಿಂದ ಪೋಷಕರು ಆತಂಕಿತರಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Bengaluru Crime: ಬೆಂಗಳೂರಿನಲ್ಲಿ ಭೀಕರ ಅತ್ಯಾಚಾರ ದಂಧೆ, ಡ್ರಗ್ಸ್‌ ನೀಡಿ 19 ಕಾಲೇಜು ಯುವತಿಯರ ಮೇಲೆ ದೌರ್ಜನ್ಯ

ಘಟನೆ ಬಳಿಕ ಪ್ರತಿಕ್ರಿಯಿಸಿರುವ ಠಾಕ್ರೆ ಬಣದ ಶಿವಸೇನೆ ಕಾರ್ಪೊರೇಟರ್ ತೇಜಶ್ರೀ ಗಾಯಕ್ವಾಡ್ ಮತ್ತು ಕಾರ್ಪೊರೇಟರ್ ಉಮೇಶ್ ಬೋರ್ಗಾಂವ್ಕರ್ ಅವರು ಕಲ್ಯಾಣ್-ಡೊಂಬಿವ್ಲಿ ಮುನ್ಸಿಪಲ್ ಕಾರ್ಪೊರೇಷನ್ ಅಧಿಕಾರಿಗಳನ್ನು ಭೇಟಿ ಮಾಡಿ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಿದರು.

ಬೀದಿ ನಾಯಿಗಳನ್ನು ಸೆರೆಹಿಡಿಯಲು ವಿಶೇಷ ತಂಡಗಳನ್ನು ನಿಯೋಜಿಸುವುದರ ಜೊತೆಗೆ ಅವುಗಳ ಸಂಖ್ಯೆಯನ್ನು ನಿಯಂತ್ರಿಸಲು ಸಂತಾನಹರಣ ಮತ್ತು ಲಸಿಕೆ ಅಭಿಯಾನಗಳನ್ನು ತೀವ್ರಗೊಳಿಸಬೇಕು ಎಂದು ಆದೇಶಿಸಿದರು.

ವಿದ್ಯಾ ಇರ್ವತ್ತೂರು

View all posts by this author