Student Death: ವಸತಿ ಶಾಲೆ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು
ವಿದ್ಯಾರ್ಥಿನಿ ಪೂರ್ವಿಕ ನಿನ್ನೆ ಏಕಾಏಕಿ ಕುಸಿದು ಬಿದ್ದಿದ್ದಾಳೆ. ಕುಸಿದು ಬಿದ್ದ ಪೂರ್ವಿಕಾಳನ್ನು ಶಿಕ್ಷಕರು ತಕ್ಷಣ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಲ್ಲಿ ಚಿಕಿತ್ಸೆ ನೀಡಿದ ಬಳಿಕ ಹಾಸನದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಮಾರ್ಗ ಮಧ್ಯೆ ಬಾಲಕಿ ಮೃತಪಟ್ಟಿದ್ದಾಳೆ.

ಪೂರ್ವಿಕಾ

ಕೊಡಗು: ವಸತಿ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ (Student Death) ಸಾವನ್ನಪ್ಪಿದ್ದಾಳೆ. ಕೊಡಗು (Coorg news) ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕ್ಯಾತೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಪೂರ್ವಿಕಾ ಎಂದು ಗುರುತಿಸಲಾಗಿದೆ. ಈಕೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದಳು. ವಿದ್ಯಾರ್ಥಿನಿ ಸಾವಿನ ಬಗ್ಗೆ ಬಂಧುಗಳು ಅನುಮಾನ (Suspiciously) ವ್ಯಕ್ತಪಡಿಸಿದ್ದಾರೆ.
ವಿದ್ಯಾರ್ಥಿನಿ ಪೂರ್ವಿಕ ನಿನ್ನೆ ಏಕಾಏಕಿ ಕುಸಿದು ಬಿದ್ದಿದ್ದಾಳೆ. ಕುಸಿದು ಬಿದ್ದ ಪೂರ್ವಿಕಾಳನ್ನು ಶಿಕ್ಷಕರು ತಕ್ಷಣ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಲ್ಲಿ ಚಿಕಿತ್ಸೆ ನೀಡಿದ ಬಳಿಕ ಹಾಸನದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಮಾರ್ಗ ಮಧ್ಯೆ ಬಾಲಕಿ ಮೃತಪಟ್ಟಿದ್ದಾಳೆ. ಬಾಲಕಿ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆರೋಗ್ಯವಾಗಿದ್ದ ಬಾಲಕಿ ಇದ್ದಕ್ಕಿದ್ದಂತೆ ಮೃತಪಟ್ಟ ಹಿನ್ನೆಲೆಯಲ್ಲಿ ಪೂರ್ವಿಕ ಸಾವು ಅನುಮಾನ ಮೂಡಿಸಿದೆ. ಶವವನ್ನು ಸದ್ಯ ಶವಾಗಾರದಲ್ಲಿಡಲಾಗಿದೆ. ಘಟನೆ ಕುರಿತು ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರೇಮಿಯಿಂದ ವಂಚನೆ, ಪುತ್ರಿ ಸೂಸೈಡ್, ನೊಂದ ತಾಯಿ ನೇಣಿಗೆ ಶರಣು
ಮಂಡ್ಯ: ಮಂಡ್ಯದಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ಪ್ರಿಯಕರ ಮೋಸ ಮಾಡಿದ್ದರಿಂದ ನೊಂದ ಯುವತಿಯೊಬ್ಬಳು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪುತ್ರಿಯ ಆತ್ಮಹತ್ಯೆಯಿಂದ ಮನನೊಂದು ತಾಯಿ ಸಹ ನೇಣಿಗೆ ಶರಣಾಗಿದ್ದಾರೆ. ಈ ದಾರುಣ ಘಟನೆ ಮಂಡ್ಯ ತಾಲೂಕಿನ ಹೆಬ್ಬಕವಾಡಿ ಗ್ರಾಮದಲ್ಲಿ ನಡೆದಿದೆ. ವಿಜಯಲಕ್ಷ್ಮಿ ಹಾಗೂ ಆಕೆಯ ತಾಯಿ ಲಕ್ಷ್ಮಿ (50) ಮೃತಪಟ್ಟವರು.
25 ದಿನಗಳ ಹಿಂದೆ ಲಕ್ಷ್ಮಿ ಅವರ ಪುತ್ರಿ ವಿಜಯಲಕ್ಷ್ಮಿ (21) ಆತ್ಮಹತ್ಯೆ ಮಾಡಿಕೊಂಡಿದ್ದಳು. ಫೆಬ್ರವರಿ 21ರಂದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಳು. ಈಕೆಗೆ ಪಕ್ಕದ ಮಾರಸಿಂಗನಹಳ್ಳಿ ನಿವಾಸಿ ಹರಿಕೃಷ್ಣ ಎಂಬಾತ ಮೋಸ ಮಾಡಿದ್ದ ಎಂಬ ಆರೋಪ ಕೇಳಿಬಂದಿತ್ತು. ಒಂದುವರೆ ವರ್ಷದಿಂದ ವಿಜಯಲಕ್ಷ್ಮಿ ಮತ್ತು ಹರಿಕೃಷ್ಣ ಪ್ರೀತಿಸುತ್ತಿದ್ದರು. ಇತ್ತೀಚೆಗೆ ಬೇರೆ ಹುಡುಗಿಯರ ಜೊತೆ ಹರಿಕೃಷ್ಣ ಸಂಪರ್ಕದಲ್ಲಿ ಇದ್ದ. ಈ ಬಗ್ಗೆ ಪ್ರಶ್ನಿಸಿ ಯುವತಿ ವಿಜಯಲಕ್ಷ್ಮಿ ಮದುವೆಗೆ ಪಟ್ಟು ಹಿಡಿದಿದ್ದಾಳೆ. ಮದುವೆಗೆ ನಿರಾಕರಿಸಿ ಹರಿಕೃಷ್ಣ, ವಿಜಯಲಕ್ಷ್ಮಿಯನ್ನು ಆವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಇದರಿಂದ ಮನನೊಂದು ವಿಜಯಲಕ್ಷ್ಮಿ ಆತ್ಮಹತ್ಯೆಗೆ ಶರಣಾಗಿದ್ದಳು.
ಈ ಕುರಿತು ವಿಜಯಲಕ್ಷ್ಮಿ ತಂದೆ ಮಂಡ್ಯ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ನ್ಯಾಯ ಕೇಳಲು ಹೋದವರ ವಿರುದ್ಧವೇ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಆರೋಪ ವ್ಯಕ್ತವಾಗಿತ್ತು. ಮಗಳ ಸಾವಿಗೆ ನ್ಯಾಯ ಸಿಕ್ಕಿಲ್ಲವೆಂದು ಮನನೊಂದು ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಲಕ್ಷ್ಮಿ ಶವ ಸಾಗಿಸಲು ಬಿಡದೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಆರೋಪಿ ಹರಿಕೃಷ್ಣ ಮತ್ತು ಕುಟುಂಬದವರನ್ನು ಬಂಧಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Hit and Run: ಉಡುಪಿ ಬಳಿ ಹಿಟ್ ಆ್ಯಂಡ್ ರನ್, ಬೈಕ್ ಸವಾರ ಸಾವು